ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ ಇಂದು ಆರಂಭ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2012, 19:30 IST
Last Updated 1 ಏಪ್ರಿಲ್ 2012, 19:30 IST

ಬೆಂಗಳೂರು:  ಈ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಸೋಮವಾರದಿಂದ ಆರಂಭವಾಗಲಿದೆ. ರಾಜ್ಯದಾದ್ಯಂತ 3,003 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಒಟ್ಟು 8.39 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸುತ್ತಿದ್ದಾರೆ. ಇದೇ 16ರವರೆಗೂ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಪರೀಕ್ಷೆಗಾಗಿ ಸಕಲ ಸಿದ್ಧತೆ ಮಾಡಿದೆ. ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆಗಳು ಬಹಿರಂಗಗೊಂಡ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಇಂತಹ ಲೋಪಗಳು ನಡೆಯದಂತೆ ಸರ್ಕಾರ ತೀವ್ರ ನಿಗಾ ಇಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT