ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ನಡೆದ ಎಸ್ಸೆಸ್ಸೆಲ್ಸಿ ತೃತೀಯ ಭಾಷಾ ವಿಷಯದ ಪರೀಕ್ಷೆಯಲ್ಲಿ ನಕಲು ಮಾಡಿದ 12 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ. ಗುಲ್ಬರ್ಗದಲ್ಲಿ 6, ಕೋಲಾರದಲ್ಲಿ 3, ರಾಯಚೂರು, ವಿಜಾಪುರ ಮತ್ತು ಬಾಗಲಕೋಟೆಯಲ್ಲಿ ತಲಾ ಒಬ್ಬರನ್ನು ಡಿಬಾರ್ ಮಾಡಲಾಗಿದೆ.
ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ಪರ್ಷಿಯನ್ ಭಾಷಾ ಪರೀಕ್ಷೆ ಶುಕ್ರವಾರ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.