ADVERTISEMENT

ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಜೂನ್ 15ರಿಂದ 22ರವರೆಗೆ; ಮರು ಮೌಲ್ಯಮಾಪನ ಶುಲ್ಕ ಪ್ರತಿ ವಿಷಯಕ್ಕೆ ₹700

​ಪ್ರಜಾವಾಣಿ ವಾರ್ತೆ
Published 12 ಮೇ 2017, 10:00 IST
Last Updated 12 ಮೇ 2017, 10:00 IST
ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಜೂನ್ 15ರಿಂದ 22ರವರೆಗೆ; ಮರು ಮೌಲ್ಯಮಾಪನ ಶುಲ್ಕ ಪ್ರತಿ ವಿಷಯಕ್ಕೆ ₹700
ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಜೂನ್ 15ರಿಂದ 22ರವರೆಗೆ; ಮರು ಮೌಲ್ಯಮಾಪನ ಶುಲ್ಕ ಪ್ರತಿ ವಿಷಯಕ್ಕೆ ₹700   

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ಜೂನ್‌ 15ರಿಂದ 22ರ ವರೆಗೆ ನಡೆಯಲಿವೆ.
ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸಲು ಮೇ 22 ಕೊನೆಯ ದಿನ.

ಶುಕ್ರವಾರ ಫಲಿತಾಂಶ ಪ್ರಕಟಿಸಿದ ಶಿಕ್ಷಣ ಸಚಿವ ತನ್ವೀರ್‌ ಸೇಠ್‌ ಅವರು, ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ಅನುತ್ತೀರ್ಣ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಹೆಚ್ಚಿನ ಸಿದ್ಧತೆ ನಡೆಸಬೇಕು. ಇರುವ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ರಾಷ್ಟ್ರೀಯ ಶೀಕ್ಷಣ ನೀತಿ ಅನ್ವಯ ಕೃಪಾಂಕ ನೀಡಿಲ್ಲ. ಇದು ವಿದ್ಯಾರ್ಥಿಗಳ ಸಾಮರ್ಥ್ಯದ ನೈಜ ಫಲಿತಾಂಶ ಎಂದು ತನ್ವೀರ್ ಸೇಠ್‌ ಅವರು, ಪೂರಕ ಪರೀಕ್ಷೆ ಶುಲ್ಕ, ಛಾಯಾಪ್ರತಿ ಪಡೆಯುವ ಕೊನೆ ದಿನಾಂಕಗಳ ವಿವರಗಳನ್ನು ನೀಡಿದರು.

ADVERTISEMENT

ಅನುತ್ತೀರ್ಣ ವಿದ್ಯಾರ್ಥಿಗಳ ಪೂರಕ ಪರೀಕ್ಷೆ ಶುಲ್ಕ ವಿವರ(ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಪ್ರವರ್ಗ–1ರ ವಿದ್ಯಾರ್ಥಿಗಳನ್ನು ಹೊರತುಪಡಿಸಿ)

* ಒಂದು ವಿಷಯಕ್ಕೆ ₹240
* ಎರಡು ವಿಷಯಕ್ಕೆ ₹290
* ಮೂರು ಅಥವಾ ಹೆಚ್ಚಿನ ವಿಷಯಗಳು ₹ 390

ಉತ್ತರ ಪತ್ರಿಕೆ ಛಾಯಾ ಪ್ರತಿ
ಉತ್ತರ ಪತ್ರಿಕೆ ಛಾಯಾ ಪ್ರತಿಗಾಗಿ ಹಾಗೂ ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಮೇ 22 ಕೊನೆಯ ದಿನ.
* ಛಾಯಾ ಪ್ರತಿ ಶುಲ್ಕ: ಪ್ರತಿ ವಿಷಯಕ್ಕೆ ₹300
* ಮರು ಎಣಿಕೆ ಶುಲ್ಕ: ಪ್ರತಿ ವಿಷಯಕ್ಕೆ ₹150

ಉತ್ತರ ಪತ್ರಿಕೆ ಮರು ಮೌಲ್ಯಮಾಪನ
ಛಾಯಾಪ್ರತಿಗಳನ್ನು ಸ್ವೀಕರಿಸಿದ ಏಳು ದಿನಗಳ ಒಳಒಳಗಾಗಿ ಉತ್ತರ ಪತ್ರಿಕೆಯ ಮರು ಮೌಲ್ಯಮಾಪನಕ್ಕೆ ಪರೀಕ್ಷಾ ಮಂಡಳಿಗೆ ಸಲ್ಲಿಸಬೇಕು. 

* ಮರು ಮೌಲ್ಯಮಾಪನ ಶುಲ್ಕ ಪ್ರತಿ ವಿಷಯಕ್ಕೆ ₹700
*  ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಮುಂದಿನ ವ್ಯಾಸಂಗಕ್ಕೆ ಹಾಗೂ ಅನುತ್ತೀರ್ಣ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮರು ಮೌಲ್ಯಮಾಪನದ ಫಲಿತಾಂಶಕ್ಕಾಗಿ ಕಾಯಬಾರದು ಎಂದು ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ವಿವರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.