ADVERTISEMENT

ಏಪ್ರಿಲ್‌ 16ರಂದು ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2018, 1:46 IST
Last Updated 16 ಏಪ್ರಿಲ್ 2018, 1:46 IST
ಏಪ್ರಿಲ್‌ 16ರಂದು ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ
ಏಪ್ರಿಲ್‌ 16ರಂದು ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ   

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿರುವ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಸೋಮವಾರ(ಏಪ್ರಿಲ್‌ 16) ಬಿಡುಗಡೆ ಆಗಲಿದೆ.

ಈ ಸಂಬಂಧ ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಜಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಮತ್ತು ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಭಾನುವಾರ ರಾತ್ರಿ ಚರ್ಚೆ ನಡೆಸಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಯಡಿಯೂರಪ್ಪ, 'ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಏಪ್ರಿಲ್‌ 15ರಂದು ಅಂತಿಮಗೊಳಿಸಲಾಗುವುದು’ ಎಂದಿದ್ದರು.

ADVERTISEMENT

ಆದರೆ, ಕಾಂಗ್ರೆಸ್‌ ಭಾನುವಾರ ರಾತ್ರಿ ಪಟ್ಟಿ ಬಿಡುಗಡೆಗೊಳಿಸಿದ ಕಾರಣ ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಸೋಮವಾರ ಬಿಡುಗಡೆಗೊಳಿಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಸಂಸದರಾದ ಬಿ.ಎಸ್. ಯಡಿಯೂರಪ್ಪ, ಬಿ. ಶ್ರೀರಾಮುಲು, ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಕೆ.ಎಸ್‌.ಈಶ್ವರಪ್ಪ ಸೇರಿದಂತೆ ಈ ಬಾರಿ ಕಣಕ್ಕಿಳಿಯಲಿರುವ 72 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಏಪ್ರಿಲ್‌ 8ರಂದು ಬಿಡುಗಡೆ ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.