ADVERTISEMENT

ಐಎಎಸ್ ಅಧಿಕಾರಿಗಳ ವರ್ಗ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2011, 17:45 IST
Last Updated 8 ಮಾರ್ಚ್ 2011, 17:45 IST

ಬೆಂಗಳೂರು: ಮಾಹಿತಿ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಶೋಕ್‌ಕುಮಾರ್ ಸಿ. ಮನೋಳಿ ಸೇರಿದಂತೆ ಐದು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.

ಅಶೋಕ್‌ಕುಮಾರ್ ಮನೋಳಿ- ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ. ಎಸ್.ಎನ್.ಜಯರಾಂ- ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗ. ಬಿ.ಶಿವಪ್ಪ- ಇನ್‌ಸ್ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಅಂಡ್ ಕಮೀಷನರ್ ಆಫ್ ಸ್ಟಾಂಪ್ಸ್, ಬೆಂಗಳೂರು. ಅನುರಾಗ್ ತಿವಾರಿ- ಆಯುಕ್ತರು, ತುಮಕೂರು ಮಹಾನಗರ ಪಾಲಿಕೆ.

ಸಕ್ಕರೆ ಅಭಿವೃದ್ಧಿ ನಿರ್ದೇಶನಾಲಯದ ನಿರ್ದೇಶಕ ಎ.ಕೆ.ಮೊಣ್ಣಪ್ಪ ಅವರನ್ನು ವರ್ಗಾಯಿಸಲಾಗಿದೆ.  ಮೈಸೂರು ಮಿನರಲ್ಸ್ ಎಂ.ಡಿ . ಎನ್.ಶ್ರೀರಾಮನ್ ಅವರಿಗೆ ಹೆಚ್ಚುವರಿಯಾಗಿ ಸಕ್ಕರೆ ಅಭಿವೃದ್ಧಿ ನಿರ್ದೇಶನಾಲಯದ ಆಯುಕ್ತರ ಹೊಣೆಗಾರಿಕೆ ವಹಿಸಲಾಗಿದೆ. ಇ-ಆಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಂ.ಎನ್.ವಿದ್ಯಾಶಂಕರ್ ಅವರಿಗೆ ಹೆಚ್ಚುವರಿಯಾಗಿ ಮಾಹಿತಿ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಯ ಜವಾಬ್ದಾರಿ ನೀಡಲಾಗಿದೆ.

ಹುದ್ದೆ ನಿರೀಕ್ಷೆಯಲ್ಲಿರುವ ಐಎಎಸ್ ಅಧಿಕಾರಿ ಎಂ.ಎನ್.ವಿಜಯಕುಮಾರ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ಮತ್ತು ಪದನಿಮಿತ್ತ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.