ADVERTISEMENT

ಒಂದನೇ ತರಗತಿ ಪ್ರವೇಶಕ್ಕೆ ವಯೋಮಿತಿ ಇಳಿಕೆ

​ಪ್ರಜಾವಾಣಿ ವಾರ್ತೆ
Published 8 ಜೂನ್ 2017, 19:30 IST
Last Updated 8 ಜೂನ್ 2017, 19:30 IST
–ಸಾಂದರ್ಭಿಕ ಚಿತ್ರ
–ಸಾಂದರ್ಭಿಕ ಚಿತ್ರ   

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿಗೆ ಸೇರುವ ಮಗುವಿನ ವಯೋಮಿತಿಯನ್ನು ಐದು ವರ್ಷ, ಐದು ತಿಂಗಳಿಗೆ ಇಳಿಕೆ ಮಾಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಕಳೆದ ಜನವರಿಯಲ್ಲಿ ಮಾಡಿದ್ದ ಆದೇಶದಲ್ಲಿ ಒಂದನೇ ತರಗತಿಗೆ ದಾಖಲಾಗಲು ಐದು ವರ್ಷ, ಹತ್ತು ತಿಂಗಳು ಪೂರ್ಣಗೊಂಡಿರಬೇಕು ಎಂದು ಸೂಚಿಸಿತ್ತು. ಇದಕ್ಕೆ ಭಾರಿ ವಿರೋಧ ವ್ಯಕ್ತವಾಗಿದ್ದರಿಂದ ಇಲಾಖೆ ತನ್ನ ಆದೇಶ ಬದಲಿಸಿದೆ.

‘ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಯಲ್ಲಿ 2017–18ನೇ ಸಾಲಿಗೆ ಪ್ರವೇಶ ಪಡೆಯಬೇಕಾದರೆ ಮಗು 2012ರ ಜನವರಿ 1ಕ್ಕಿಂತ ಮೊದಲು ಜನಿಸಿರಬೇಕು’ ಎಂದು ಸ್ಪಷ್ಟಪಡಿಸಿದೆ.

ADVERTISEMENT

ಆದರೆ, ಇದೇ ವರ್ಷ ಪೂರ್ವ ಪ್ರಾಥಮಿಕ ಶಾಲೆಗೆ (ಎಲ್‌ಕೆಜಿ) ಸೇರಬೇಕಾದರೆ ಮಗುವಿಗೆ ಮೂರು ವರ್ಷ, ಹತ್ತು ತಿಂಗಳು ಕಳೆದಿರಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.