ADVERTISEMENT

ಒಳನಾಡಿನಲ್ಲಿ ಮುಂಗಾರು ದುರ್ಬಲ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2012, 19:30 IST
Last Updated 10 ಅಕ್ಟೋಬರ್ 2012, 19:30 IST

ಬೆಂಗಳೂರು: ಬುಧವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಒಳನಾಡಿನಲ್ಲಿ ಮುಂಗಾರು ದುರ್ಬಲಗೊಂಡಿದೆ. ಕರಾವಳಿಯ ಕೆಲವು ಪ್ರದೇಶಗಳು ಮತ್ತು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಿದ್ದು, ರಾಜ್ಯದ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ.

ಧರ್ಮಸ್ಥಳ, ಪುತ್ತೂರು 4, ಸುಳ್ಯ, ಮಾದಾಪುರ 3, ಮೂಡಬಿದಿರೆ, ಪೊನ್ನಂಪೇಟೆ, ವಿರಾಜಪೇಟೆ, ಚಾಮರಾಜನಗರ, ಪಾಂಡವಪುರ 2, ಕುಂದಾಪುರ, ಭಟ್ಕಳ, ಜಗಲಬೇಟ, ಶಿರಾಲಿ, ಹೊನ್ನಾವರ, ನಾಪೋಕ್ಲು, ಕಮ್ಮರಡಿ, ನಂಜನಗೂಡು, ಕೆ.ಆರ್‌ಪೇಟೆ, ಕೆ.ಆರ್.ಸಾಗರ, ಶ್ರೀರಂಗಪಟ್ಟಣ, ಹೊಸಕೋಟೆ, ಚನ್ನಪಟ್ಟಣದಲ್ಲಿ 1ಸೆಂ.ಮೀ ಮಳೆಯಾಗಿದೆ.

ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 33.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ರಾಯಚೂರಿನಲ್ಲಿ ಅತಿ ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ಕರಾವಳಿಯ ಕೆಲವೆಡೆ ಹಾಗೂ ರಾಜ್ಯದ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.