ಬೆಂಗಳೂರು: ಗುರುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ.
ಹಯ್ಯಾಳದಲ್ಲಿ 7 ಸೆಂ.ಮೀ ಮಳೆಯಾಗಿದೆ. ಶೋರಾಪುರ, ರಾಯಚೂರು ಮತ್ತು ಬಳ್ಳಾರಿಯಲ್ಲಿ ತಲಾ 5, ಕುಷ್ಟಗಿ, ತಾವರೆಗೆರೆ, ಖಜೂರಿ, ಶಹಾಪುರ ಮತ್ತು ಸೈದಾಪುರ, ದೇವದುರ್ಗದಲ್ಲಿ ತಲಾ 3, ಬೇವೂರು, ಬದಾಮಿ, ಸಿಂದಗಿ, ಔರಾದ, ಕಕ್ಕೇರಿ ಮತ್ತು ಕೊರಟಗೆರೆಯಲ್ಲಿ ತಲಾ 2, ಮುಂಡರಗಿ, ಕೊಪ್ಪಳ, ಯಲಬುರ್ಗಾ, ಹುನಗುಂದ, ತಾಳಿಕೋಟೆ, ಬಸವಕಲ್ಯಾಣ, ಗುಲ್ಬರ್ಗಾ, ಚಿತ್ತಾಪುರ, ನಲ್ವಾರ್, ಸೇಡಂ, ಹುಣಸಗಿ, ಕೆಂಬಾವಿ, ಕುರುಗೋಡು, ಸಂಡೂರು, ಪರಶುರಾಮಪುರ ಮತ್ತು ತುಮಕೂರಿನಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.
ಬಳ್ಳಾರಿ ಮತ್ತು ಚಾಮರಾಜನಗರದಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಹಾಗೂ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಕನಿಷ್ಠ ಉಷ್ಣಾಂಶ 14.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮುನ್ಸೂಚನೆ: ಮುಂದಿನ 24 ಗಂಟೆಗಳವರೆಗೂ ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮುಂದಿನ 48 ಗಂಟೆಗಳವರೆಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.