ADVERTISEMENT

‘ಒಳಮೀಸಲಾತಿ ಸಿಗುವುದಾದರೆ ರಾಜೀನಾಮೆ ಕೊಡುವೆ’

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಖಾತೆ ಸಚಿವ ಎಚ್. ಆಂಜನೇಯ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2017, 19:30 IST
Last Updated 2 ಡಿಸೆಂಬರ್ 2017, 19:30 IST
‘ಒಳಮೀಸಲಾತಿ ಸಿಗುವುದಾದರೆ ರಾಜೀನಾಮೆ ಕೊಡುವೆ’
‘ಒಳಮೀಸಲಾತಿ ಸಿಗುವುದಾದರೆ ರಾಜೀನಾಮೆ ಕೊಡುವೆ’   

ಚಿತ್ರದುರ್ಗ: ‘ನನ್ನ ರಾಜೀನಾಮೆಯಿಂದ ಮಾದಿಗ ಜನಾಂಗಕ್ಕೆ ಒಳಮೀಸಲಾತಿ ಸಿಗುತ್ತದೆ ಎನ್ನುವುದಾದರೆ ಅದಕ್ಕೂ ಸಿದ್ಧ ’ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಖಾತೆ ಸಚಿವ ಎಚ್. ಆಂಜನೇಯ ಭರವಸೆ ನೀಡಿದರು.

ಮಾದಿಗ ಜನಾಂಗಕ್ಕೆ ಒಳಮೀಸಲಾತಿ ನೀಡುವಂತೆ ಆಗ್ರಹಿಸಿ ಕೂಡಲಸಂಗಮದಿಂದ ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಂಡಿರುವ ಕಾರ್ಯಕರ್ತರನ್ನು ಶನಿವಾರ ನಗರದ ಅಂಬೇಡ್ಕರ್ ಕಲ್ಯಾಣ ಮಂಟಪದಲ್ಲಿ ಭೇಟಿಯಾಗಿ ಅವರು ಮಾತುಕತೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಒಳಮೀಸಲಾತಿಗೆ ಶಿಫಾರಸು ಮಾಡಲು ಅಸಹಾಯಕರಾದರೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಹೋರಾಟಕ್ಕೆ ಬರಬೇಕು ಎಂದು ಹೋರಾಟಗಾರರು ಕೇಳುತ್ತಿದ್ದಾರೆ. ಇದರಲ್ಲಿ ಅಸಹಾಯಕತೆಯ ಪ್ರಶ್ನೆಯೇ ಇಲ್ಲ. ರಾಜೀನಾಮೆಯಿಂದ ಅನುಕೂಲವಾಗುತ್ತದೆ, ಹೋರಾಟಗಾರರಿಗೆ ಸಮಾಧಾನವಾಗುತ್ತದೆ ಎನ್ನುವುದಾದರೆ ಅದಕ್ಕೂ ಸಿದ್ಧನಿದ್ದೇನೆ’ ಎಂದು ಸ್ಪಷ್ಟಪಡಿಸಿದರು.

ADVERTISEMENT

‘ಸದಾಶಿವ ವರದಿ ಅನುಷ್ಠಾನದಿಂದ ಭೋವಿ, ಲಂಬಾಣಿ, ಕೊರಚ ಜನಾಂಗವನ್ನು ಪರಿಶಿಷ್ಟ ಜಾತಿಯಿಂದ ಹೊರ ಹಾಕಲಾಗುತ್ತದೆ ಎಂಬ ತಪ್ಪು ಮಾಹಿತಿಯಿಂದಾಗಿ, ಆ ಸಮುದಾಯದವರು ಒಳಮೀಸಲಾತಿ ವಿರೋಧಿಸುತ್ತಿದ್ದಾರೆ. ಸಂವಿಧಾನದ ಪ್ರಕಾರ ಯಾವುದೇ ಆಯೋಗಕ್ಕಾಗಲಿ, ರಾಜ್ಯ ಸರ್ಕಾರಕ್ಕಾಗಲಿ ಒಂದು ಜಾತಿಯನ್ನು ಸೇರಿಸುವ ಅಥವಾ ತೆಗೆಯುವುದಕ್ಕೆ ಅಧಿಕಾರ ಇರುವುದಿಲ್ಲ. ಕೇಂದ್ರ ನೀಡುವ ಆದೇಶವನ್ನು ಯಥಾವತ್ತಾಗಿ ಜಾರಿಗೊಳಿಸುವುದಷ್ಟೇ ನಮ್ಮ ಕೆಲಸ. ಹಾಗಾಗಿ ಈ ವಿಚಾರದಲ್ಲಿ ಆ ಸಮುದಾಯದವರು ಭಯಪಡಬೇಕಾಗಿಲ್ಲ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.