ADVERTISEMENT

ಕಂಬಳಕ್ಕೆ ಅವಕಾಶ: ಸಂತಸ

​ಪ್ರಜಾವಾಣಿ ವಾರ್ತೆ
Published 4 ಜುಲೈ 2017, 19:30 IST
Last Updated 4 ಜುಲೈ 2017, 19:30 IST
ಕಂಬಳಕ್ಕೆ ಅವಕಾಶ: ಸಂತಸ
ಕಂಬಳಕ್ಕೆ ಅವಕಾಶ: ಸಂತಸ   

ಮಂಗಳೂರು: ಕರಾವಳಿಯ ಸಾಂಸ್ಕೃತಿಕ ಕ್ರೀಡೆ ಕಂಬಳದ ಆಚರಣೆಗೆ ಸುಗ್ರೀವಾಜ್ಞೆ ಮೂಲಕ ಅವಕಾಶ ದೊರೆತಿದ್ದು, ಮುಂದಿನ ದಿನಗಳಲ್ಲಿ ಕಂಬಳವನ್ನು ನಿಯಮಗಳ ಅನ್ವಯವೇ ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಶಾಂತಾರಾಮ ಶೆಟ್ಟಿ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಿಯಮಗಳ ಅನ್ವಯವೇ ಕಂಬಳ ನಡೆಸಲು ಕಂಬಳ ಕೋಣಗಳ ಮಾಲೀಕರು ಮತ್ತು ಸಂಘಟಕರು ಸಹಕರಿಸಬೇಕಾಗಿದೆ’ಎಂದರು.

‘ಸುಗ್ರೀವಾಜ್ಞೆಯ ಅವಧಿ ಆರು ತಿಂಗಳು ಮಾತ್ರ. ಆದ್ದರಿಂದ ಪ್ರಾಣಿ ಹಿಂಸಾಚಾರ ತಡೆ ಕಾಯ್ದೆ ತಿದ್ದುಪಡಿ ಮಸೂದೆಗೆ ಚಳಿಗಾಲದ ಅಧಿವೇಶನದಲ್ಲಿ ಅಂಕಿತ ದೊರೆಯಬೇಕಾಗಿದೆ. ಬಳಿಕ ಅದನ್ನು ನೇರವಾಗಿ ಕೇಂದ್ರ ಸರ್ಕಾರಕ್ಕೆ ಕಳುಹಿಸುವಂತೆ ರಾಷ್ಟ್ರಪತಿಗಳು ಸೂಚಿಸಿದ್ದಾರೆ ‘ ಎಂದು ವಿವರಿಸಿದರು.

ADVERTISEMENT

ಕಂಬಳ ಕ್ರೀಡೆ ವಿರುದ್ಧ ಹೈಕೋರ್ಟ್‌ ನೀಡಿರುವ ತಡೆಯಾಜ್ಞೆ ತೆರವುಗೊಳಿಸುವ ನಿಟ್ಟಿನಲ್ಲಿ ಸುಗ್ರೀವಾಜ್ಞೆ ವಿವರವನ್ನು ಕೋರ್ಟ್‌ಗೆ ಸಲ್ಲಿಸಲಾಗಿದೆ. ಬುಧವಾರ ತಡೆಯಾಜ್ಞೆ ತೆರವಾಗುವ ನಿರೀಕ್ಷೆ ಇದೆ ಎಂದು  ಕಂಬಳ ಪರ ಕಾನೂನು ಹೋರಾಟಗಾರ ಅಶೋಕ್ ರೈ ಹೇಳಿದರು.

ನಗರದ ಎಂ.ಜಿ. ರಸ್ತೆಯಲ್ಲಿ ಮಂಗಳವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.