ADVERTISEMENT

ಕಟ್ಟಾಳುಗಳ ನ್ಯಾಯಾಂಗ ಬಂಧನ ನವೆಂಬರ 26 ರ ವರೆಗೆ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2011, 10:00 IST
Last Updated 26 ಅಕ್ಟೋಬರ್ 2011, 10:00 IST
ಕಟ್ಟಾಳುಗಳ ನ್ಯಾಯಾಂಗ ಬಂಧನ ನವೆಂಬರ 26 ರ ವರೆಗೆ ವಿಸ್ತರಣೆ
ಕಟ್ಟಾಳುಗಳ ನ್ಯಾಯಾಂಗ ಬಂಧನ ನವೆಂಬರ 26 ರ ವರೆಗೆ ವಿಸ್ತರಣೆ   

ಬೆಂಗಳೂರು (ಪಿಟಿಐ): ಭೂ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಮತ್ತು ಅವರ ಪುತ್ರ, ಪಾಲಿಕೆ ಸದಸ್ಯ ಕಟ್ಟಾ ಜಗದೀಶ ಹಾಗೂ ಇಟಾಸ್ಕಾ ಕಂಪೆನಿ ವ್ಯವಸ್ಥಾಪಕ ನಿರ್ದೇಶಕ ಎಸ್.ವಿ.ಶ್ರೀನಿವಾಸ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯವು ಬುಧವಾರ ನವೆಂಬರ್ 26ರ ವರೆಗೆ ವಿಸ್ತರಿಸಿದೆ.

ಈ ಮೂವರು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯು ಬುಧವಾರ ಕೊನೆಗೊಂಡ ಹಿನ್ನೆಲೆಯಲ್ಲಿ, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಅವರು ನ್ಯಾಯಾಂಗ ಬಂಧನದ ಅವಧಿಯನ್ನು ಈಗ ನವೆಂಬರ್ 26ರ ವರೆಗೆ ವಿಸ್ತರಿಸಿ ಆದೇಶ ನೀಡಿದರು. 

ಇದಕ್ಕೂ ಮೊದಲು ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ಕ್ಯಾನ್ಸರ್ ಕಾಯಿಲೆಗೆ  ಹೆಚ್ಚಿನ ಚಿಕಿತ್ಸೆ ಪಡೆಯಲು  ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾದ ಬಗ್ಗೆ  ಜೈಲು ಅಧಿಕಾರಿಗಳಿಂದ ಮಾಹಿತಿ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT