ADVERTISEMENT

ಕಯ್ಯಾರರಿಗೆ ಪಂಪ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 20 ಮೇ 2014, 19:30 IST
Last Updated 20 ಮೇ 2014, 19:30 IST

ಬದಿಯಡ್ಕ: ಕಾಸರಗೋಡು ಜಿಲ್ಲೆಯ ಪೆರಡಾಲ ಕವಿತಾ ಕುಟೀರದ ಹಿರಿಯ ಕವಿ ಕಯ್ಯಾರ ಕಿಂಞಣ್ಣ ರೈ ಅವರಿಗೆ 2013ನೇ ಸಾಲಿನ ಕರ್ನಾಟಕ ಸರ್ಕಾರದ ಪ್ರತಿಷ್ಠಿತ ಪಂಪ ಪ್ರಶಸ್ತಿ ಘೋಷಣೆಯಾಗಿದೆ.

ಕರ್ನಾಟಕ ಸರ್ಕಾರದ ಪರವಾಗಿ ಮಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಚಂದ್ರಹಾಸ ರೈ ಅವರು ಮಂಗಳ­ವಾರ ಕಯ್ಯಾರರ ಮನೆಗೆ ತೆರಳಿ ಆಹ್ವಾನ ಪತ್ರಿಕೆಯನ್ನು ನೀಡಿದರು. ಇದೇ 23­ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಆದರೆ ಅಸೌಖ್ಯದಿಂದ ಬಳಲುತ್ತಿರುವ ಕಯ್ಯಾರರು ಬೆಂಗಳೂ­ರಿಗೆ ತೆರಳುವ ಸಾಧ್ಯತೆ ಕಡಿಮೆ ಇದೆ.

ಕಯ್ಯಾರರು ರಾಷ್ಟ್ರಪ್ರಶಸ್ತಿ ವಿಜೇತ ನಿವೃತ್ತ ಕನ್ನಡ ಅಧ್ಯಾಪಕರು. ಅವರು ‘ದುರ್ಗಾದಾಸ’ ಎಂಬ ಕಾವ್ಯನಾಮದಲ್ಲಿ ಅನೇಕ ಬರಹಗಳನ್ನು ಬರೆದಿದ್ದಾರೆ. 1915 ಜೂನ್‌ 8ರಂದು ಪೆರಡಾಲ­ದಲ್ಲಿ ಜನಸಿದ ಅವರಿಗೆ ಇದೇ ಜೂನ್‌ 8ರಂದು  ಜನ್ಮಶತಮಾನೋತ್ಸವ ಕಾರ್ಯ­ಕ್ರಮ ನಡೆಯಲಿದೆ. ಇದಕ್ಕೆ ಸಿದ್ಧತೆ ನಡೆಯುತ್ತಿದ್ದಂತೆಯೇ ಪಂಪ ಪ್ರಶಸ್ತಿ ಘೋಷಣೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.