ಬೆಂಗಳೂರು: ಭಾನುವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಕರಾವಳಿ ಸೇರಿದಂತೆ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಕನಿಷ್ಠ ಉಷ್ಣಾಂಶ 12.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ತುಂತುರು ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.