ಬೆಂಗಳೂರು: ಸೋಮವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗಿದೆ.
ಸಿದ್ದಾಪುರ 7 ಸೆಂ.ಮೀ, ಮಂಕಿ 6 ಸೆಂ.ಮೀ, ಕೊಲ್ಲೂರು 4 ಸೆಂ.ಮೀ, ಸುಬ್ರಹ್ಮಣ್ಯ, ಹೊನ್ನಾವರ, ಕಾರವಾರ 3 ಸೆಂ.ಮೀ, ಮೂಲ್ಕಿ, ಶಿರಾಲಿ 2 ಸೆಂ.ಮೀ, ಪುತ್ತೂರು, ಸುಳ್ಯ, ಮಂಗಳೂರು ವಿಮಾನ ನಿಲ್ದಾಣ, ಕಾರ್ಕಳ, ಕೋಟಾ, ಕುಮಟಾ, ಹೊಸನಗರ, ಬುಕ್ಕಾಪಟ್ಟಣ 1 ಸೆಂ.ಮೀ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದ್ದು, ಬೀದರ್‌ನಲ್ಲಿ 41.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.