ADVERTISEMENT

ಕರ್ನಾಟಕ ಪ್ರವಾಸೋದ್ಯಮಕ್ಕೆ ನಾಲ್ಕನೇ ಸ್ಥಾನ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2011, 18:00 IST
Last Updated 3 ಫೆಬ್ರುವರಿ 2011, 18:00 IST

ಬೆಂಗಳೂರು: ‘ಇಂಗ್ಲೆಂಡ್ ಮೂಲದ ‘ಕಾಂಡೆನಾಸ್ಟ್ ಟ್ರಾವೆಲರ್’ ನಿಯತಕಾಲಿಕೆಯ ಇತ್ತೀಚಿನ ಆವೃತ್ತಿಯಲ್ಲಿ ವಿಶ್ವದ 11 ಪ್ರಸಿದ್ಧ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಕರ್ನಾಟಕ 4ನೇ ಸ್ಥಾನ ಪಡೆದುಕೊಂಡಿದೆ’ ಎಂದು ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಕೆ.ವಿಶ್ವನಾಥ ರೆಡ್ಡಿ ಹರ್ಷ ವ್ಯಕ್ತಪಡಿಸಿದರು.

‘ಅಂತರರಾಷ್ಟ್ರೀಯ ನಿಯತಕಾಲಿಕೆಯು ಪ್ರವಾಸಿಗರಿಗೆ ಕರ್ನಾಟಕದಲ್ಲಿ ಯಾವ ಪ್ರದೇಶದಲ್ಲಿ ವಿಹರಿಸಬೇಕೆಂಬುದರ ಬಗ್ಗೆ ವಿವರವಾದ ಮಾಹಿತಿ ನೀಡಿದೆ. ರಾಜ್ಯ ಪ್ರವಾಸೋದ್ಯಮ ಇಲಾಖೆಯ ಪ್ರಯತ್ನಕ್ಕೆ ದೊರೆತ ಮನ್ನಣೆಯಾಗಿದೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. 

‘ಕಳೆದ ವರ್ಷ ರಾಜ್ಯ ಪ್ರವಾಸೋದ್ಯಮ ಇಲಾಖೆಯು ಲಂಡನ್, ಬ್ರೆಜಿಲ್, ಪ್ಯಾರಿಸ್ ಸೇರಿದಂತೆ ಇತರ ರಾಷ್ಟ್ರಗಳಲ್ಲಿ ಕರ್ನಾಟಕದ ಪ್ರವಾಸಿ ತಾಣಗಳ ಕುರಿತು ಅಭಿಯಾನ ನಡೆಸಿತ್ತು. ಅದರಂತೆ ವಿದೇಶಿ ಪ್ರವಾಸಿಗರ ಸಂಖ್ಯೆಯಲ್ಲಿ 2010ರಲ್ಲಿ ಶೇ 25ರಷ್ಟು ಹೆಚ್ಚಳವಾಗಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.