ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಉಮೇದುವಾರರಾಗಿ ಪರಿಷತ್ತಿನ ನಿಕಟಪೂರ್ವ ಕೋಶಾಧ್ಯಕ್ಷ ಪುಂಡಲೀಕ ಹಾಲಂಬಿ ಮತ್ತು ಚಲನಚಿತ್ರ ನಟ ಅಶೋಕ ಅವರು ಶನಿವಾರ ನಾಮಪತ್ರ ಸಲ್ಲಿಸಿದ್ದಾರೆ.
ಕಸಾಪ ಚುನಾವಣೆಗೆ ನಾಮಪತ್ರ ಸ್ವೀಕಾರ ಬುಧವಾರ (ಮಾ. 21) ಆರಂಭವಾಗಿದೆ. ಮಾ.ಚಿ.ಕೃಷ್ಣ ಮತ್ತು ಆರ್.ಎಸ್.ಎನ್. ಗೌಡ ಅವರು ಮೊದಲ ದಿನವೇ ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾ ಅಧಿಕಾರಿ ಕೆ. ನಾಗರಾಜು `ಪ್ರಜಾವಾಣಿ~ಗೆ ತಿಳಿಸಿದರು.
ಮಹಾರಾಷ್ಟ್ರ ಗಡಿನಾಡು ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಚ್.ಬಿ.ಎಲ್. ರಾವ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಂ. ಪ್ರಕಾಶಮೂರ್ತಿ ಮತ್ತು `ಸಚಿವ~ ಶ್ರೀಧರ್ ನಾಮಪತ್ರ ಸಲ್ಲಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಇದುವರೆಗೆ ಯಾರೂ ನಾಮಪತ್ರ ಸಲ್ಲಿಸಿಲ್ಲ ಎಂದು ಮಾಹಿತಿ ನೀಡಿದರು. ಕಸಾಪ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಸೋಮವಾರ ಬೆಳಿಗ್ಗೆ ನಾಮಪತ್ರ ಸಲ್ಲಿಸುವುದಾಗಿ ಪ್ರೊ. ಚಂದ್ರಶೇಖರ ಪಾಟೀಲ (ಚಂಪಾ) `ಪ್ರಜಾವಾಣಿ~ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.