ADVERTISEMENT

ಕಲಾಪ ಬಹಿಷ್ಕಾರ ಕೈಬಿಟ್ಟ ವಕೀಲರು

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2012, 19:30 IST
Last Updated 20 ಮಾರ್ಚ್ 2012, 19:30 IST

ಬೆಂಗಳೂರು: ಇಲ್ಲಿನ ಸಿಟಿ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಇದೇ 2ರಂದು ನಡೆದ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಒತ್ತಾಯಿಸಿ ನ್ಯಾಯಾಲಯ ಕಲಾಪ ಬಹಿಷ್ಕರಿಸುತ್ತಿದ್ದ ವಕೀಲರು ಪ್ರತಿಭಟನೆ ಕೈಬಿಡುವ ನಿರ್ಧಾರ ಕೈಗೊಂಡಿದ್ದಾರೆ.

ಮಂಗಳವಾರವೂ ನ್ಯಾಯಾಲಯ ಕಲಾಪಕ್ಕೆ ಹಾಜರಾಗದೆ ಪ್ರತಿಭಟನೆ ನಡೆಸಿದ ವಕೀಲರನ್ನು ಭೇಟಿ ಮಾಡಿದ ಸಚಿವರಾದ ಆರ್.ಅಶೋಕ ಮತ್ತು ಎಸ್.ಸುರೇಶ್‌ಕುಮಾರ್, ಘಟನೆ ಸಂಬಂಧ ಸಿಐಡಿ ಡಿಜಿಪಿ ರೂಪಕ್‌ಕುಮಾರ್ ದತ್ತ ಅವರ ವರದಿ ಆಧರಿಸಿ ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಸಂಜೆ ವೇಳೆಗೆ ಅಧಿಕಾರಿಗಳ ವರ್ಗಾವಣೆ ಆದೇಶವೂ ಹೊರಬಿತ್ತು. ಈ ಹಿನ್ನೆಲೆಯಲ್ಲಿ ವಕೀಲರು ಪ್ರತಿಭಟನೆಯಿಂದ ಹಿಂದೆ ಸರಿದು ಬುಧವಾರದಿಂದ ಕಲಾಪಕ್ಕೆ ಹಾಜರಾಗುವ ನಿರ್ಧಾರ ಕೈಗೊಂಡರು.

ಈ ಹಿನ್ನೆಲೆಯಲ್ಲಿ ವಕೀಲರು ಪ್ರತಿಭಟನೆಯಿಂದ ಹಿಂದೆ ಸರಿದು ಬುಧವಾರದಿಂದ ಕಲಾಪಕ್ಕೆ ಹಾಜರಾಗುವ ನಿರ್ಧಾರ ಕೈಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.