ADVERTISEMENT

ಕಲ್ಲಡ್ಕದಲ್ಲಿ ಗಲಭೆಯಿಂದ ಪರಿಸ್ಥಿತಿ ಉದ್ವಿಗ್ನ: ನಾಲ್ಕು ತಾಲ್ಲೂಕುಗಳಲ್ಲಿ ನಿಷೇಧಾಜ್ಞೆ ಜಾರಿ

​ಪ್ರಜಾವಾಣಿ ವಾರ್ತೆ
Published 14 ಜೂನ್ 2017, 18:59 IST
Last Updated 14 ಜೂನ್ 2017, 18:59 IST
–ಸಾಂದರ್ಭಿಕ ಚಿತ್ರ
–ಸಾಂದರ್ಭಿಕ ಚಿತ್ರ   

ಮಂಗಳೂರು: ಮಂಗಳೂರು: ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಪಟ್ಟಣದಲ್ಲಿ ಮಂಗಳವಾರ ಸಂಜೆ ನಡೆದ ಗಲಭೆಯ ಬಳಿಕ ಉದ್ವಿಗ್ನ ಸ್ಥಿತಿ ಇದ್ದು, ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮತ್ತು ಸುಳ್ಯ ತಾಲ್ಲೂಕುಗಳಲ್ಲಿ ಜೂನ್‌ 21ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಕಳೆದ ಮೇ 26ರಂದು ನಡೆದ ಚೂರಿ ಇರಿತ, ಹಲ್ಲೆ ಪ್ರಕರಣದ ಬಳಿಕ ಬಂಟ್ವಾಳ ತಾಲ್ಲೂಕಿಗೆ ಸೀಮಿತವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

ನಿಷೇಧಾಜ್ಞೆಯ ನಡುವೆಯೇ ಕಲ್ಲಡ್ಕದಲ್ಲಿ ಹಿಂಸಾಚಾರ ನಡೆದಿರುವ ಕಾರಣ ಇತರೆ ತಾಲ್ಲೂಕುಗಳಲ್ಲೂ ನಿಷೇಧಾಜ್ಞೆ ಜಾರಿ ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಧಿಕಾರಿ ಭೂಷಣ್‌ ಜಿ.ಬೊರಸೆ,  ಶಿಫಾರಸು ಮಾಡಿದ್ದರು.

ADVERTISEMENT

ಮತ್ತೊಬ್ಬನ ಮೇಲೆ ಹಲ್ಲೆ: ಕಲ್ಲಡ್ಕ ಘಟನೆಯ ಪರಿಣಾಮವಾಗಿ ಮೆಲ್ಕಾರ್‌ ಎಂಬಲ್ಲಿ ಪವನ್‌ ಎಂಬಾತನ ಮೇಲೆ ಐವರು ಹಲ್ಲೆ ನಡೆಸಿದ್ದಾರೆ.   ಮಂಗಳವಾರದ ಗಲಭೆಗೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು ಹದಿನೆಂಟು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.