ADVERTISEMENT

ಕಸಾಪ ಚುನಾವಣೆ: ಮತದಾನಕ್ಕೆ ಶಿಕ್ಷಕರಿಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2012, 19:30 IST
Last Updated 19 ಏಪ್ರಿಲ್ 2012, 19:30 IST

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯಕ್ಕೆ ನಿಯೋಜಿತರಾಗಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಮತದಾರರೂ ಆಗಿರುವ ಶಿಕ್ಷಕರಿಗೆ, ಇದೇ 29ರಂದು ನಡೆಯುವ ಕಸಾಪ ಚುನಾವಣೆಯ ಮತದಾನದಲ್ಲಿ ಪಾಲ್ಗೊಳ್ಳಲು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅನುಮತಿ ನೀಡಿದೆ.

ಕಸಾಪ ಮತದಾರರ ಪಟ್ಟಿಯಲ್ಲಿ ಶಿಕ್ಷಕರು ಸಾಕಷ್ಟು ಸಂಖ್ಯೆಯಲ್ಲಿ ಇದ್ದಾರೆ. ಮತದಾನದ ದಿನ ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವೂ ಇದೆ. ಹಲವು ಶಿಕ್ಷಕರನ್ನು ಈ ಕಾರ್ಯಕ್ಕೆ ನಿಯೋಜಿಸಲಾಗಿದೆ. ಅವರಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಸಾಕಷ್ಟು ಮಂದಿ ಮನವಿ ಮಾಡಿದ್ದರು. ಇದನ್ನು ಮಂಡಳಿಯ ಗಮನಕ್ಕೆ ತಂದು ಅವರಿಂದ ಅನುಮತಿ ಪಡೆದುಕೊಳ್ಳಲಾಗಿದೆ ಎಂದು ಕಸಾಪ ಕೇಂದ್ರ ಚುನಾವಣಾ ಅಧಿಕಾರಿ ಎಸ್.ಟಿ. ಮೋಹನ ರಾಜು `ಪ್ರಜಾವಾಣಿ~ಗೆ ತಿಳಿಸಿದರು.

ಶಿಕ್ಷಕರು ಮತದಾನದ ದಿನ ಕೆಲವು ಗಂಟೆಗಳ ಕಾಲ ಪರೀಕ್ಷಾ ಕೇಂದ್ರದಿಂದ ಹೊರಬಂದು, ಮತದಾನದಲ್ಲಿ ಪಾಲ್ಗೊಳ್ಳಲು ಮಂಡಳಿ ಅವಕಾಶ ನೀಡಿದೆ ಎಂದು ಅವರು ಮಾಹಿತಿ ನೀಡಿದರು. ಇದೇ 23ರಿಂದ 30ರವರೆಗೆ ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT