ADVERTISEMENT

ಕಾಂಗ್ರೆಸ್‌ಗೆ ನಟಿ ಭಾವನಾ, ಆದಿಲೋಕೇಶ್

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2012, 19:30 IST
Last Updated 12 ಮಾರ್ಚ್ 2012, 19:30 IST

ಬೆಂಗಳೂರು: ಚಲನಚಿತ್ರ ನಟಿ ಭಾವನಾ ಮತ್ತು ನಟ ಆದಿ ಲೋಕೇಶ್ ಅವರು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್, ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ ಅವರ ಸಮ್ಮುಖದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಮಂಗಳವಾರ ಕಾಂಗ್ರೆಸ್ ಸೇರಲಿದ್ದಾರೆ. 

 ಮಧ್ಯಾಹ್ನ 2 ಗಂಟೆಗೆ ನಡೆಯುವ ಸಾರ್ವಜನಿಕ ಸಭೆಯಲ್ಲಿ ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ, ಸಂಸದ ಧರ್ಮಸಿಂಗ್, ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಕೆಪಿಸಿಸಿ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.