ತುಮಕೂರು: ಕೋಮುವಾದಿಗಳ ಸಹವಾಸ ಸಾಕಾಗಿದೆ. ಲೋಕಸಭೆ ಚುನಾವಣೆಗೆ ಮುನ್ನ ರಾಜಕೀಯ ತೀರ್ಮಾನ ಪ್ರಕಟಿಸುತ್ತೇನೆ ಎಂದು ಬಿಜೆಪಿ ಲೋಕಸಭಾ ಸದಸ್ಯ ಜಿ.ಎಸ್.ಬಸವರಾಜು ಶನಿವಾರ ತಿಳಿಸಿದರು.
‘ಕುರಿ ಮಂದೆಯಿಂದ ಹೊರಬಂದ ಕುರಿಯೊಂದು ಮತ್ತೆ ಮಂದೆ ಸೇರದ ಹೊರತು ಅದಕ್ಕೆ ಉಳಿಗಾಲ ಇರುವುದಿಲ್ಲ’ ಎಂದು ಹೇಳುವ ಮೂಲಕ ಮತ್ತೆ ಕಾಂಗ್ರೆಸ್ ಸೇರಲು ಚಿಂತಿಸಿರುವುದಾಗಿ ಸ್ಪಷ್ಟಪಡಿಸಿದರು.
‘ಕಾಂಗ್ರೆಸ್ ಸೇರ್ಪಡೆಗೆ ಆ ಪಕ್ಷದ ಮುಖಂಡರಿಂದಲೇ ಆಕ್ಷೇಪ ವ್ಯಕ್ತವಾಗುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಕೇಂದ್ರ ಸಚಿವ ಎ.ಕೆ.ಆಂಟನಿ ನಿರ್ಧಾರದ ಮುಂದೆ ಕೆಪಿಸಿಸಿ ಹಾಗೂ ಎಐಸಿಸಿ ಆಟ ನಡೆಯದು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.