ADVERTISEMENT

ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಸೈಲ್ ಮತ್ತು ಆಪ್ತರ ಮನೆ ಮೇಲೆ ಐಟಿ ದಾಳಿ

​ಪ್ರಜಾವಾಣಿ ವಾರ್ತೆ
Published 11 ಮೇ 2018, 4:37 IST
Last Updated 11 ಮೇ 2018, 4:37 IST
ಸತೀಶ್ ಸೈಲ್ - ಮಂಗಲ್ ದಾಸ್ ಕಾಮತ್
ಸತೀಶ್ ಸೈಲ್ - ಮಂಗಲ್ ದಾಸ್ ಕಾಮತ್   

ಕಾರವಾರ: ಇಲ್ಲಿನ ಶಾಸಕ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಸೈಲ್ ಅವರ ಆಪ್ತ ಮಂಗಲ್ ದಾಸ್ ಕಾಮತ್ ಎಂಬುವವರ ಮನೆಯ ಮೇಲೆ ಶುಕ್ರವಾರ ಬೆಳಿಗ್ಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಅಂಕೋಲಾ ತಾಲ್ಲೂಕಿನ ಆವರ್ಸಾದಲ್ಲಿರುವ ಮಂಗಲದಾಸ್ ನಿವಾಸದಲ್ಲಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇದಕ್ಕೂ ಮೊದಲು ಸತೀಶ್ ಸೈಲ್ ಅವರ ಸದಾಶಿವಗಡ ನಿವಾಸಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದರು.

ಬೆಂಗಳೂರು ಹಾಗೂ ಹುಬ್ಬಳ್ಳಿ ಆದಾಯ ತೆರಿಗೆ ಅಧಿಕಾರಿಗಳ ತಂಡ ಈ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.