ADVERTISEMENT

ಕಾಂಗ್ರೆಸ್ ಸೇರಿದ ಜೀಜಾ, ಸುಂದರ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2013, 19:59 IST
Last Updated 22 ಏಪ್ರಿಲ್ 2013, 19:59 IST

ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಜೀಜಾ ಹರಿಸಿಂಗ್, ನಿವೃತ್ತ ಐಎಫ್‌ಎಸ್ ಅಧಿಕಾರಿ ಡಾ.ಕೆ.ಸುಂದರ ನಾಯ್ಕ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿದ್ದ ಸಿ.ಆರ್.ಮನೋಹರ್, ವೀರಶೈವ ಮಹಾಸಭಾ ಉಪಾಧ್ಯಕ್ಷ ಸಚ್ಚಿದಾನಂದ ಮೂರ್ತಿ ಮತ್ತಿತರರು ಸೋಮವಾರ ಕಾಂಗ್ರೆಸ್ ಪಕ್ಷ ಸೇರಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯಿಲಿ ಅವರು ಎಲ್ಲರನ್ನೂ ಪಕ್ಷಕ್ಕೆ ಬರಮಾಡಿಕೊಂಡರು. ಕಾಂಗ್ರೆಸ್ ಪಕ್ಷದ ಧ್ಯೇಯ, ಸಿದ್ಧಾಂತ ಮತ್ತು ಆದರ್ಶಗಳಿಗೆ ಮನಸೋತು ಪಕ್ಷ ಸೇರುತ್ತಿರುವುದಾಗಿ ನಾಲ್ವರೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.