ADVERTISEMENT

ಕಾಯಂ ಇಲ್ಲ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2012, 19:30 IST
Last Updated 7 ಫೆಬ್ರುವರಿ 2012, 19:30 IST

ಬೆಂಗಳೂರು: ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ವಿದ್ಯುತ್ ಪ್ರತಿನಿಧಿಗಳನ್ನು ಕಾಯಂಗೊಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಮಂಗಳವಾರ ವಿಧಾನ ಸಭೆಯಲ್ಲಿ ತಿಳಿಸಿದರು.

ಶೂನ್ಯವೇಳೆಯಲ್ಲಿ ವಿರೋಧ ಪಕ್ಷದ ಉಪ ನಾಯಕ ಟಿ.ಬಿ.ಜಯಚಂದ್ರ ಮಾಡಿದ ಪ್ರಸ್ತಾವಕ್ಕೆ ಉತ್ತರಿಸಿದ ಅವರು, 3699 ಮಂದಿ ಗ್ರಾಮ ವಿದ್ಯುತ್ ಪ್ರತಿನಿಧಿಗಳು ಸೇವೆ ಸಲ್ಲಿಸುತ್ತಿದ್ದು, ಅವರಿಗೆ ಪ್ರೋತ್ಸಾಹಧನ ನೀಡಲಾಗುತ್ತಿದೆ. ಅವರ ಸೇವೆ ಕಾಯಂಗೊಳಿಸುವ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.