ಬೆಂಗಳೂರು: ಪುರಸಭೆ, ಪ.ಪಂ ನಗರ ಸಭೆಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ, ನಗರ ಪಾಲಿಕೆಗಳ ಮೇಯರ್ ಮತ್ತು ಉಪ ಮೇಯರ್ ಸ್ಥಾನಗಳಿಗೆ ಸರ್ಕಾರ ಸಿದ್ಧಪಡಿಸಿದ್ದ ಮೀಸಲಾತಿ ಪಟ್ಟಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದ ಆದೇಶವನ್ನು ಹೈಕೋರ್ಟ್ ಕಾಯ್ದಿರಿಸಿದೆ.
ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ಅಬ್ದುಲ್ ಅಜೀಜ್ ಮತ್ತು ದಾವಣಗೆರೆಯ ಎಚ್.ಕೆ. ಹಾಲೇಶ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಮೀಸಲಾತಿ ಪಟ್ಟಿಗೆ ಸೆ. 5ರಂದು ತಡೆಯಾಜ್ಞೆ ನೀಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.