ADVERTISEMENT

ಕಾವೇರಿ: ತಮಿಳುನಾಡಿನ ದಬ್ಬಾಳಿಕೆ ಸಲ್ಲದು - ಎಚ್‌ಡಿಕೆ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2012, 19:30 IST
Last Updated 25 ಮಾರ್ಚ್ 2012, 19:30 IST

ಶಿವಮೊಗ್ಗ: ಕಾವೇರಿ ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರದ ದಬ್ಬಾಳಿಕೆ ಸರಿಯಲ್ಲ. ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾದರೆ ಮಾತ್ರ ನೀರು ಲಭ್ಯವಾಗುತ್ತದೆ. ತಮಿಳುನಾಡು ಸರ್ಕಾರ ವಾಸ್ತವ ಸ್ಥಿತಿ ಅರ್ಥೈಸಿಕೊಳ್ಳಬೇಕು ಎಂದು  ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ನಗರದ ಭಾನುವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸುವ ತಮಿಳುನಾಡಿನ ಕ್ರಮ ಸರಿಯಲ್ಲ. ಕಾನೂನಿನಿಂದ ಎಲ್ಲ ಸಮಸ್ಯೆ ಪರಿಹಾರವಾಗುವುದಿಲ್ಲ; ರೈತರು ಅಸಮಾಧಾನಗೊಂಡು ಬೀದಿಗಿಳಿದರೆ ಸಾಕಷ್ಟು ಸಂಕಷ್ಟ ಎದುರಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ರಾಜ್ಯದ ಎಲ್ಲೆಡೆ ಬರಗಾಲ ತಾಂಡವಾಡುತ್ತಿರುವಾಗ ಜನರ ಸಮಸ್ಯೆಗೆ ಸ್ಪಂದಿಸಬೇಕಾದ ಸಚಿವರು ದೆಹಲಿಗೆ ಪ್ರತ್ಯೇಕ ನಿಯೋಗ ತೆರಳುತ್ತಿರುವುದು ಶೋಚನೀಯ ಸಂಗತಿ ಎಂದರು.

ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಬಹಿರಂಗಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಯು ಮಂಡಳಿ ಅಧಿಕಾರಿಗಳ ವಿರುದ್ಧ ತಕ್ಷಣವೇ ಸರ್ಕಾರ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.