
ಪ್ರಜಾವಾಣಿ ವಾರ್ತೆ
ನವದೆಹಲಿ (ಪಿಟಿಐ): ಕಾವೇರಿ ಉಸ್ತುವಾರಿ ಸಮಿತಿಯು ಇದೇ ಮೊದಲ ಬಾರಿಗೆ ಶನಿವಾರ ಸಭೆ ಸೇರಿದ್ದು, ಸಭೆಯಲ್ಲಿ ನೀರು ಬಿಡುವಂತೆ ಕರ್ನಾಟಕವನ್ನು ತಮಿಳುನಾಡು ಆಗ್ರಹಿಸಿದೆ.
ಕೇಂದ್ರ ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಎಸ್.ಕೆ. ದಾಸ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತಮಿಳುನಾಡು ಜೂನ್ ತಿಂಗಳ ತನ್ನ ಪಾಲಿನ ನೀರನ್ನು ಬಿಡುವಂತೆ ರಾಜ್ಯವನ್ನು ಒತ್ತಾಯಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.