ADVERTISEMENT

‘ಕಾವೇರಿ: ಸಂಕಷ್ಟ ಪರಿಹಾರ ಸೂತ್ರ ರಚಿಸದೆ ಗೊಂದಲ ಸೃಷ್ಟಿ’

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2016, 19:53 IST
Last Updated 11 ಸೆಪ್ಟೆಂಬರ್ 2016, 19:53 IST

ಉಡುಪಿ: ‘ಸಂಕಷ್ಟ ಪರಿಹಾರ ಸೂತ್ರ ರಚನೆಯಾಗದಿರುವುದೇ ಕಾವೇರಿ ನದಿ ನೀರು ಹಂಚಿಕೆ ವಿಷಯದಲ್ಲಿ ಗೊಂದಲಗಳಾಗಲು ಹಾಗೂ ರಾಜ್ಯಕ್ಕೆ ಹಿನ್ನಡೆ ಆಗಲು ಕಾರಣ’ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದರು.

ಇಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ನೀರನ್ನು ಯಾವ ರೀತಿ ಹಂಚಿಕೊಳ್ಳಬೇಕು ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಇದೇ ಕಾರಣಕ್ಕೆ ತಮಿಳುನಾಡು ಆಗಾಗ್ಗೆ ಕ್ಯಾತೆ ತೆಗೆಯುತ್ತಿದೆ. ಸದ್ಯ ಕುಡಿಯುವ ನೀರಿನ ಬಳಕೆಗೆ ಸಾಕಾಗುವಷ್ಟು ಮಾತ್ರ ನೀರು ಜಲಾಶಯಗಳಲ್ಲಿದೆ.

ಕುಡಿಯುವ ನೀರಿಗೆ ಯಾವುದೇ ರೀತಿಯ ತೊಂದರೆ ಕೊಡಬಾರದು ಎಂಬ ನಿಯಮ ಇದ್ದರೂ, ತಮಿಳುನಾಡು ನೀರು ಬಿಡುವಂತೆ ಒತ್ತಾಯ ಮಾಡುತ್ತಿದೆ. ನ್ಯಾಯಾಲಯದ ಪ್ರಕ್ರಿಯೆಗಳು ವೇಗ ಪಡೆದುಕೊಂಡರೆ ಮತ್ತು ಸಂಕಷ್ಟ ಪರಿಹಾರ ಸೂತ್ರವನ್ನು ನ್ಯಾಯಾಲಯ ನಿಗದಿ ಮಾಡಿದರೆ ಎಲ್ಲ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.