ADVERTISEMENT

ಕಾಸರಗೋಡು ಕನ್ನಡಿಗರ ಮೇಲೆ ಮಲಯಾಳ ಹೇರಿಕೆ ಆರೋಪ: ಕರವೇ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 8 ಜೂನ್ 2017, 6:02 IST
Last Updated 8 ಜೂನ್ 2017, 6:02 IST
ಕಾಸರಗೋಡು ಕನ್ನಡಿಗರ ಮೇಲೆ ಮಲಯಾಳ ಹೇರಿಕೆ ಆರೋಪ: ಕರವೇ ಪ್ರತಿಭಟನೆ
ಕಾಸರಗೋಡು ಕನ್ನಡಿಗರ ಮೇಲೆ ಮಲಯಾಳ ಹೇರಿಕೆ ಆರೋಪ: ಕರವೇ ಪ್ರತಿಭಟನೆ   

ಕಾಸರಗೋಡು: ಕೇರಳ ಸರ್ಕಾರ ಕಾಸರಗೋಡಿನ ಕನ್ನಡಿಗರ ಮೇಲೆ ಮಲಯಾಳ ಭಾಷೆ ಹೇರಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ‘ಕಾಸರಗೋಡು ಚಲೋ’ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ನಡೆಸಲಾಗುತ್ತಿರುವ ಹೋರಾಟಕ್ಕೆ ಚಾಲನೆ ನೀಡಿ ಮಾತನಾಡಿದ ಪರ್ಯಾಯ ಪೇಜಾವರ ಮಠದ ಕಿರಿಯ ವಿಶ್ವಪ್ರಸನ್ನ ಸ್ವಾಮೀಜಿ ಅವರು, ‘ಕನ್ನಡ ಶಾಲೆಗಳಲ್ಲಿ ಮಲಯಾಳ ಕಡ್ಡಾಯ ಮಾಡುವುದರಿಂದ ಕನ್ನಡ ಭಾಷೆ ನಶಿಸಿ ಹೋಗಲಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಕನ್ನಡ ಶಾಲೆಗಳಲ್ಲಿ ಮಲಯಾಳ ಭಾಷೆಯನ್ನು ಕಡ್ಡಾಯ ಮಾಡಬಾರದು’ ಎಂದು ಆಗ್ರಹಿಸಿದರು.

ಜತೆಗೆ ‘ರಾಜ್ಯದ ಗಡಿಗಳಲ್ಲಿ ಎಲ್ಲಿಯೂ ಇಂತಹ ಸಮಸ್ಯೆ ಆಗದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು. ಎರಡೂ ಭಾಷಿಕರು ಪರಸ್ಪರ ಒಂದಾಗಿ ನಡೆದರೆ ಮಾತ್ರ ಘರ್ಷಣೆಗೆ ಅವಕಾಶ ಇರುವುದಿಲ್ಲ. ಕಾಸರಗೋಡು ಕನ್ನಡ ನಾಡಿಗೆ ಸೇರಬೇಕು’ ಎಂದು ಅಭಿಪ್ರಾಯ ಪಟ್ಟರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.