ADVERTISEMENT

ಕಿರಿಯ ಎಂಜಿನಿಯರ್ ಅಮಾನತು

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2011, 18:40 IST
Last Updated 2 ಫೆಬ್ರುವರಿ 2011, 18:40 IST

ಚಿತ್ರದುರ್ಗ: ಕಾಮಗಾರಿಯೊಂದರ ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆಸಿದ ಆರೋಪದ ಮೇಲೆ ಪಂಚಾಯತ್‌ರಾಜ್ ಎಂಜಿನಿಯರ್ ವಿಭಾಗದ ಕಿರಿಯ ಎಂಜಿನಿಯರ್ ಆರ್. ಜಯಪ್ಪ ಅವರನ್ನು ಅಮಾನತು ಮಾಡಲಾಗಿದೆ.

ಮೊಳಕಾಲ್ಮುರು ತಾಲ್ಲೂಕು ಚಿಕ್ಕೇರಹಳ್ಳಿ ಗ್ರಾಮದಲ್ಲಿ ಅಂತರ್ಜಲ ಅಭಿವೃದ್ಧಿ ಕಾಮಗಾರಿಯನ್ನು ರೂ. 5 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲು ಉದ್ದೇಶಿಸಲಾಗಿತ್ತು. ಆದರೆ, ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮಗಳನ್ನು ಉಲ್ಲಂಘಿಸಲಾಗಿತ್ತು. 2010ರ ಡಿಸೆಂಬರ್ 23 ಕೊನೆಯ ದಿನವಾಗಿದ್ದರೂ, ಡಿ. 27ರತನಕ ಮುಂದೂಡಿ ಅಂತರ್ಜಾಲದಲ್ಲಿ ತಿದ್ದುಪಡಿ ಮಾಡಲಾಗಿತ್ತು.

ಈ ಅಕ್ರಮವನ್ನು ದಿನಗೂಲಿ ನೌಕರ ಶಕೀಲ್ ಅಹಮ್ಮದ್ ಹಾಗೂ ಕಿರಿಯ ಎಂಜಿನಿಯರ್ ಆರ್. ಜಯಪ್ಪ ಎಸಗಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ನಗರ ಠಾಣೆಯಲ್ಲಿ ಚಿಕ್ಕೇರಹಳ್ಳಿಯ  ಗೋವಿಂದಪ್ಪ ಡಿಸೆಂಬರ್ 29ರಂದು ದೂರು ದಾಖಲಿಸಿದ್ದರು.
ಈ ಪ್ರಕರಣದ ಹಿನ್ನೆಲೆಯಲ್ಲಿ ಶಕೀಲ್ ಅಹಮದ್ ಅವರನ್ನು ಸರ್ಕಾರಿ ಸೇವೆಯಿಂದ ಕೈಬಿಡಲಾಗಿದೆ. ಜತೆಗೆ, ಜವಾಬ್ದಾರಿಯುತ ವಿಭಾಗದ ಅಧಿಕಾರಿಯಾಗಿದ್ದ ಆರ್. ಜಯಪ್ಪ ಅವರನ್ನು ಕರ್ತವ್ಯ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನದ ಮೇರೆಗೆ ಅಮಾನತುಗೊಳಿಸಿ ಜಿಲ್ಲಾ ಪಂಚಾಯ್ತಿ ಸಿಇಒ ರಂಗೇಗೌಡ ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.