ADVERTISEMENT

ಕುಕ್ಕರಹಳ್ಳಿ ಕೆರೆಯಲ್ಲಿ ಪೆಲಿಕಾನ್‌ ಸಾವು

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2017, 19:30 IST
Last Updated 7 ಡಿಸೆಂಬರ್ 2017, 19:30 IST
ಕುಕ್ಕರಹಳ್ಳಿ ಕೆರೆಯಲ್ಲಿ ಪೆಲಿಕಾನ್‌ ಸಾವು
ಕುಕ್ಕರಹಳ್ಳಿ ಕೆರೆಯಲ್ಲಿ ಪೆಲಿಕಾನ್‌ ಸಾವು   

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ‍ಅಸ್ವಸ್ಥಗೊಂಡಿದ್ದ ಹೆಜ್ಜಾರ್ಲೆ (ಪೆಲಿಕಾನ್‌) ಗುರುವಾರ ಮೃತಪಟ್ಟಿದೆ. ಮತ್ತೊಂದು ಹೆಜ್ಜಾರ್ಲೆ ಅಸ್ವಸ್ಥಗೊಂಡಿದೆ.
‘ಪಶುವೈದ್ಯರು ಕೆರೆ ಪ್ರದೇಶವನ್ನು ಪರಿಶೀಲಿಸಿದ್ದಾರೆ. ಹಕ್ಕಿಜ್ವರದ ಆತಂಕ ಬೇಡ. ಸತ್ತಿರುವ ಪಕ್ಷಿಯನ್ನು ಪರೀಕ್ಷೆಗೆ ಬೆಂಗಳೂರಿನ ಪಶು ವೈದ್ಯಕೀಯ ಸಂಸ್ಥೆಯ ಪ್ರಯೋಗಾಲಯಕ್ಕೆ ರವಾನಿಸಿದ್ದೇವೆ’ ಎಂದು ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ಪ್ರಸಾದ್‌ ಮೂರ್ತಿ ‘ಪ್ರಜಾವಾಣಿ’ಗೆ ತಿಳಿಸಿದರು.

‘ಕೆರೆಯ ಸುತ್ತಮುತ್ತ ಪ್ಲಾಸ್ಟಿಕ್‌ ಹಾಗೂ ಇತರ ತ್ಯಾಜ್ಯದ ರಾಶಿ ಇದೆ. ಸತ್ತ ಪ್ರಾಣಿಗಳ ಅವಶೇಷಗಳು ಇಲ್ಲಿದ್ದು, ತೆರವುಗೊಳಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ’ ಎಂದರು. ಕೆರೆಯಲ್ಲಿ ಸುಮಾರು 200 ಪೆಲಿಕಾನ್‌ಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT