ADVERTISEMENT

ಕುಮಾರಸ್ವಾಮಿ ಬಂಧನಕ್ಕೆ ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 15 ಜೂನ್ 2017, 12:37 IST
Last Updated 15 ಜೂನ್ 2017, 12:37 IST
ಕುಮಾರಸ್ವಾಮಿ ಬಂಧನಕ್ಕೆ ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್‌
ಕುಮಾರಸ್ವಾಮಿ ಬಂಧನಕ್ಕೆ ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್‌   

ಬೆಂಗಳೂರು: ಮುಂದಿನ ವಿಚಾರಣೆ ಮುಗಿಯುವವರೆಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಬಂಧಿಸದಂತೆ ವಿಶೇಷ ತನಿಖಾ ದಳ(ಎಸ್‌ಐಟಿ)ಕ್ಕೆ ಹೈಕೋರ್ಟ್‌ ಆದೇಶ ನೀಡಿದೆ. ಇದರಿಂದಾಗಿ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಕುಮಾರಸ್ವಾಮಿ ಅವರು ತಾತ್ಕಾಲಿಕವಾಗಿ ನಿರಾಳವಾಗಿದ್ದಾರೆ.

ಮುಖ್ಯಮಂತ್ರಿಯಾಗಿದ್ದ ವೇಳೆ ಅಕ್ರಮವಾಗಿ ಜಂತಕಲ್‌ ಗಣಿ ಕಂಪೆನಿ ಅನಿಮತಿ ನೀಡಿದ್ದಾರೆ ಎಂಬ ಅರೋಪ ಕುಮಾರಸ್ವಾಮಿ ಅವರ ಮೇಲಿದೆ. ಹಾಗಾಗಿ ಬಂಧನ ಭೀತಿಯಲ್ಲಿರುವ ಅವರು ನಿರೀಕ್ಷಣಾ ಜಾಮೀನು ಕೋರಿ ಎಸ್‌ಐಟಿ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಇದನ್ನು ವಿಶೇಷ ನ್ಯಾಯಾಲಯ ವಜಾ ಮಾಡಿತ್ತು.

ಬಳಿಕ ಕುಮಾರಸ್ವಾಮಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ನ್ಯಾ.ರತ್ನಕಲಾ ಅವರು ಪ್ರಕರಣವನ್ನು ಮುಂದೂಡಿದ್ದು, ಮಂದಿನ ವಿಚಾರಣೆ ಮುಗಿಯುವವರೆಗೂ ಕುಮಾರಸ್ವಾಮಿ ಅವರನ್ನು ಬಂಧಿಸದಂತೆ ಮಧ್ಯಂತರ ಆದೇಶ ಹೊರಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.