ADVERTISEMENT

ಕುಮಾರಸ್ವಾಮಿ ಹೇಳಿಕೆಗೆ ತೀವ್ರ ತರಾಟೆ

​ಪ್ರಜಾವಾಣಿ ವಾರ್ತೆ
Published 9 ಜುಲೈ 2013, 19:59 IST
Last Updated 9 ಜುಲೈ 2013, 19:59 IST

ಬೆಂಗಳೂರು:  ಒಕ್ಕಲಿಗ ಅಧಿಕಾರಿಗಳ ವರ್ಗಾವಣೆ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎನ್ನುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಎಚ್. ಡಿ.ಕುಮಾರಸ್ವಾಮಿ ಅವರ ಹೇಳಿಕೆಯೇ ಒಂದು ರೀತಿ ಜಾತಿ ರಾಜಕಾರಣ ಎತ್ತಿ ತೋರಿಸುತ್ತದೆ ಎಂದು ಕಾಂಗ್ರೆಸ್ ಮುಖಂಡರು ಮತ್ತು ಕುರುಬರ ಸಂಘದ ಪದಾಧಿಕಾರಿಗಳು ಟೀಕಿಸಿದ್ದಾರೆ.

ಮಂಗಳವಾರ ನಡೆದ ಪ್ರತ್ಯೇಕ ಸುದ್ದಿಗೋಷ್ಠಿಗಳಲ್ಲಿ ಮಾತನಾಡಿದ ಮುಖಂಡರು, ಕುಮಾರಸ್ವಾಮಿ ಹೇಳಿಕೆ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ ಮಾತನಾಡಿ, `ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳೆರಡೂ ಪ್ರಜಾಪ್ರಭುತ್ವದ ಎರಡು ಗಾಲಿ ಇದ್ದಂತೆ. ಎರಡೂ ಪಕ್ಷಗಳವರು ಅಧಿಕಾರ ವಹಿಸಿಕೊಳ್ಳುವಾಗ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವುದಾಗಿ ಪ್ರಮಾಣ ವಚನ ಸ್ವೀಕರಿಸಿರುತ್ತಾರೆ. ಆದರೆ, ಕುಮಾರಸ್ವಾಮಿ ಅವರು ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ಜಾತಿ, ಧರ್ಮದ ಆಧಾರದಲ್ಲಿ ರಾಜಕಾರಣ ಮಾಡುತ್ತಿದ್ದಾರೆ' ಎಂದು ಟೀಕಿಸಿದರು.

ಬಹಿರಂಗ ಕ್ಷಮೆಗೆ ಆಗ್ರಹ: `ಕುಮಾರಸ್ವಾಮಿ ಬಹಿರಂಗ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಅವರು ಶೋಷಿತ ವರ್ಗಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ' ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಕೆ.ಬಿ.ಶಾಂತಪ್ಪ ಎಚ್ಚರಿಸಿದರು.

  `ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತ್ಯತೀತ ನಾಯಕ. ಅವರು ವಿರೋಧ ಪಕ್ಷದ ನಾಯಕರಾಗಿದ್ದಾಗ ಯಾರೊಬ್ಬರ ತೋಜೋವಧೆ ಮಾಡಿರಲಿಲ್ಲ' ಎಂದೂ ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.