ADVERTISEMENT

ಕುರುಡಮಲೈ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಹುಲ್‌ ಗಾಂಧಿ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2018, 7:37 IST
Last Updated 7 ಏಪ್ರಿಲ್ 2018, 7:37 IST
ಕೋಲಾರ ಜಿಲ್ಲೆಯ ಕುರುಡುಮಲೆಯಲ್ಲಿ ಶನಿವಾರ ಜನಾಶೀರ್ವಾದ ಯಾತ್ರೆ ವೇಳೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಾರ್ವಜನಿಕರಿಗೆ ಹಸ್ತಲಾಘವ ನೀಡಿದರು.
ಕೋಲಾರ ಜಿಲ್ಲೆಯ ಕುರುಡುಮಲೆಯಲ್ಲಿ ಶನಿವಾರ ಜನಾಶೀರ್ವಾದ ಯಾತ್ರೆ ವೇಳೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಾರ್ವಜನಿಕರಿಗೆ ಹಸ್ತಲಾಘವ ನೀಡಿದರು.   

ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕುರುಡಮಲೈನ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಜನಾಶೀರ್ವಾದ ಯಾತ್ರೆ ಆರಂಭಿಸಿದರು.

ಜಿಲ್ಲೆಯ ಕೆಜಿಎಫ್, ಬಂಗಾರಪೇಟೆ ಹಾಗೂ ಕೋಲಾರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ರಾಹುಲ್ ಗಾಂಧಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಜತೆಗೆ ರೋಡ್ ಶೋ, ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಸಚಿವ ಡಿ.ಕೆ. ಶಿವಕುಮಾರ್, ಸಂಸದರಾದ ಕೆ.ಎಚ್.ಮುನಿಯಪ್ಪ, ವೀರಪ್ಪ ಮೊಯಿಲಿ ಹಾಗೂ ಪಕ್ಷದ ಹಲವು ಮುಖಂಡರು ಜತೆಗಿದ್ದಾರೆ.

ADVERTISEMENT

ಇದನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.