
ಪ್ರಜಾವಾಣಿ ವಾರ್ತೆ
ಕುಶಾಲನಗರ: ಸಮೀಪದ ಹಾರಂಗಿ ಹಿನ್ನೀರು ವ್ಯಾಪ್ತಿಯಲ್ಲಿರುವ ಹೆರೂರು ಅರಣ್ಯ ಪ್ರದೇಶದಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಅರಣ್ಯ ಹೊತ್ತಿಉರಿದಿದೆ. ಕಿಡಿಗೇಡಿಗಳು ಬೆಂಕಿ ಹಾಕಿರಬಹುದೆಂದು ವಲಯ ಅರಣ್ಯಾಧಿಕಾರಿ ಎಂ.ಎಂ. ಅಚ್ಚಪ್ಪ ಶಂಕೆ ವ್ಯಕ್ತಪಡಿಸಿದ್ದಾರೆ.
ಮಧ್ಯಾಹ್ನದ ವೇಳೆ ಬೆಂಕಿ ಕಾಣಸಿಕೊಂಡಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳ ಮತ್ತು ಅರಣ್ಯ ಸಿಬ್ಬಂದಿ ಪ್ರಯತ್ನಿಸಿದರು. ಗ್ರಾಮ ಅರಣ್ಯ ಸಮಿತಿ ಸದಸ್ಯರು ಮತ್ತು ಗ್ರಾಮಸ್ಥರು ಸೊಪ್ಪಿನ ಗಿಡಗಳಿಂದ ಬೆಂಕಿ ನಂದಿಸಲು ಮುಂದಾದರು. ಸಂಜೆವರೆಗೂ ನಿರಂತರವಾಗಿ ಪ್ರಯತ್ನಿಸಿದ್ದರಿಂದ ಬೆಂಕಿ ಸ್ವಲ್ಪ ಕಡಿಮೆಯಾಗಿದೆ ಎಂದು ಅಚ್ಚಪ್ಪ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.