ಬೆಂಗಳೂರು: ಶ್ವಾಸಕೋಶದ ಸೋಂಕಿನಿಂದಾಗಿ ಅನಾರೋಗ್ಯಕ್ಕೆ ಒಳಗಾದ ನಟ, ಸಚಿವ ಅಂಬರೀಷ್ ಅವರ ಆರೋಗ್ಯ ಸ್ಥಿತಿಯಲ್ಲಿ ಮತ್ತಷ್ಟು ಚೇತರಿಕೆ ಕಂಡುಬಂದಿದ್ದು, ಅವರಿಗೆ ಅಳವಡಿಸಲಾಗಿದ್ದ ಕೃತಕ ಉಸಿರಾಟ ಸಾಧನವನ್ನು ತೆಗೆಯಲಾಗಿದೆ.
ಎರಡು ವಾರಗಳ ಹಿಂದೆ ಕೃತಕ ಉಸಿರಾಟ ಸಾಧನವನ್ನು ಅಳವಡಿಸಲಾಗಿತ್ತು. ಅಂಬರೀಷ್ ಸಹಜ ಉಸಿರಾಟ ಸ್ಥಿತಿಗೆ ಮರಳಿದ್ದು, ಚಿಕಿತ್ಸೆ ನೀಡುತ್ತಿರುವ ಸಿಂಗಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಯ ವೈದ್ಯರು ಸಾಧನವನ್ನು ತೆಗೆದಿದ್ದಾರೆ.
ಈ ಬಗ್ಗೆ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ವಿಕ್ರಂ ಆಸ್ಪತ್ರೆಯ ಶ್ವಾಸಕೋಶ ತಜ್ಞ ಡಾ.ಕೆ.ಎಸ್.ಸತೀಶ್, ‘ಅಂಬರೀಷ್ ಅವರ ಆರೋಗ್ಯದ ಬಗ್ಗೆ ಸತತವಾಗಿ ಸಿಂಗಪುರದ ವೈದ್ಯರಿಂದ ಮಾಹಿತಿ ಪಡೆಯುತ್ತಿದ್ದೇವೆ. ಅವರ ಎಲ್ಲ ಅಂಗಾಂಗಗಳು ಸಹಜ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಶ್ವಾಸಕೋಶದ ಸೋಂಕು ಕಡಿಮೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.