ADVERTISEMENT

ಕೃಷ್ಣಾ ಮೇಲ್ದಂಡೆ: ಬಿ ಸ್ಕೀಂ ನೀರು ಬಳಕೆಗೆ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2011, 19:30 IST
Last Updated 29 ಅಕ್ಟೋಬರ್ 2011, 19:30 IST

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಯ `ಬಿ~ ಸ್ಕೀಂ ಅಡಿ ಲಭ್ಯವಾಗುವ ನೀರನ್ನು ಬಳಸಿಕೊಳ್ಳುವ ದೃಷ್ಟಿಯಿಂದ ಸುಮಾರು 22 ಕೋಟಿ ರೂಪಾಯಿ ವೆಚ್ಚದ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಶನಿವಾರ ನಡೆದ ಕೃಷ್ಣಾ ಭಾಗ್ಯ ಜಲ ನಿಗಮದ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಜಲಸಂಪನ್ಮೂಲ ಇಲಾಖೆಯ ಮೂಲಗಳು ತಿಳಿಸಿವೆ.

ವಿಜಾಪುರ, ರಾಯಚೂರು, ಗುಲ್ಬರ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಹೊಸ ನೀರಾವರಿ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಮತ್ತು ಹಾಲಿ ಇರುವ ಯೋಜನೆಗಳನ್ನು ವಿಸ್ತರಿಸುವ ಮೂಲಕ ಕರ್ನಾಟಕಕ್ಕೆ ಲಭ್ಯವಾಗುವ ನೀರನ್ನು ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.