ADVERTISEMENT

ಕೃಷ್ಣ, ಕುಮಾರಸ್ವಾಮಿ, ಧರಂಸಿಂಗ್ ಗೆ ಹಿನ್ನಡೆ, ಅಕ್ರಮ ಗಣಿಗಾರಿಕೆ ತನಿಖೆಗೆ ಹೈಕೋರ್ಟ್ ಅಸ್ತು

​ಪ್ರಜಾವಾಣಿ ವಾರ್ತೆ
Published 20 ಜನವರಿ 2012, 14:20 IST
Last Updated 20 ಜನವರಿ 2012, 14:20 IST
ಕೃಷ್ಣ, ಕುಮಾರಸ್ವಾಮಿ, ಧರಂಸಿಂಗ್ ಗೆ ಹಿನ್ನಡೆ, ಅಕ್ರಮ ಗಣಿಗಾರಿಕೆ ತನಿಖೆಗೆ ಹೈಕೋರ್ಟ್ ಅಸ್ತು
ಕೃಷ್ಣ, ಕುಮಾರಸ್ವಾಮಿ, ಧರಂಸಿಂಗ್ ಗೆ ಹಿನ್ನಡೆ, ಅಕ್ರಮ ಗಣಿಗಾರಿಕೆ ತನಿಖೆಗೆ ಹೈಕೋರ್ಟ್ ಅಸ್ತು   

ಬೆಂಗಳೂರು (ಐಎಎನ್ಎಸ್): ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪುತ್ರ ಎಚ್.ಡಿ. ಕುಮಾರ ಸ್ವಾಮಿ ಅವರು ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ನಡೆದ ಅಕ್ರಮ ಗಣಿಗಾರಿಕೆ ಆರೋಪಗಳ ಬಗ್ಗೆ ತನಿಖೆಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಅನುಮತಿ ನೀಡಿದೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎನ್. ಧರಂ ಸಿಂಗ್ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ನಡೆದ ಅಕ್ರಮ ಗಣಿಗಾರಿಕೆ ಆರೋಪಗಳ ತನಿಖೆಗೂ ನ್ಯಾಯಾಲಯ ಸಮ್ಮತಿ ನೀಡಿದೆ.

ಇದರಿಂದಾಗಿ ಕಾಂಗ್ರೆಸ್ ಪಕ್ಷ ಹಾಗೂ ಜನತಾದಳ ತೀವ್ರ ಹಿನ್ನಡೆ ಹಾಗೂ ಮುಜುಗರದ ಪರಿಸ್ಥಿತಿ ಎದುರಿಸುವಂತಾಗಿದೆ.

ಎಸ್. ಎಂ, ಕೃಷ್ಣ ಅವರು 1999-2004ರವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಗಣಿಗಾರಿಕೆ ಸಲುವಾಗಿ ವಿಶಾಲವಾದ ಮೀಸಲು ಅರಣ್ಯ ಪ್ರದೇಶವನ್ನು ಬಿಟ್ಟುಕೊಟ್ಟರು ಎಂಬ ಆರೋಪಗಳಿದ್ದು ಈ ಬಗ್ಗೆ ತನಿಖೆ ನಡೆಸಲು ನ್ಯಾಯಾಲಯದ ಈದಿನ ಒಪ್ಪಿಗೆ ನೀಡಿತು.

ನ್ಯಾಯಮೂರ್ತಿ ಎನ್. ಆನಂದ ಅವರ ಪೀಠವು ಕೃಷ್ಣ ಮತ್ತು ಕುಮಾರ ಸ್ವಾಮಿ ಅವರು ತಮ್ಮ ವಿರುದ್ಧ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್ ಐಆರ್) ಸಲ್ಲಿಸಿದ ಸಂಬಂಧ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಪ್ರತ್ಯೇಕ ಮೇಲ್ಮನವಿಗಳನ್ನು ಭಾಗಶಃ ತಿರಸ್ಕರಿಸುತು.
 
ಧರಂ ಸಿಂಗ್ ಅವರು ಅಕ್ರಮ ಗಣಿಗಾರಿಕೆಗೆ ಪ್ರೋತ್ಸಾಹ ನೀಡಿದರೆಂಬ ಕುರಿತ ಆರೋಪ ಕುರಿತ ತನಿಖೆಗೂ ನ್ಯಾಯಾಲಯ ಒಪ್ಪಿಗೆ ನೀಡಿತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.