ADVERTISEMENT

ಕೃಷ್ಣ ಜಾಮೀನು ಅರ್ಜಿ ತಿರಸ್ಕೃತ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2011, 19:30 IST
Last Updated 20 ಅಕ್ಟೋಬರ್ 2011, 19:30 IST

ಬೆಂಗಳೂರು:  ಗೆಜೆಟೆಡ್ ಪ್ರೊಬೇಷನರ್ಸ್‌ ಅಕ್ರಮ ನೇಮಕಾತಿ ಪ್ರಕರಣದ ಆರೋಪಿ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ ಎಚ್.ಎನ್.ಕೃಷ್ಣ ಅವರ ಜಾಮೀನು ಅರ್ಜಿಯನ್ನು ನಗರದ ಹದಿನೈದನೇ ತ್ವರಿತ ನ್ಯಾಯಾಲಯ ತಿರಸ್ಕರಿಸಿದೆ.

ಎಂಟನೇ ಎಸಿಎಂಎಂ ನ್ಯಾಯಾಲಯ ಕೃಷ್ಣ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಆದ್ದರಿಂದ ಜಾಮೀನು ಕೋರಿ ಕೃಷ್ಣ ತ್ವರಿತ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿರುವ ನ್ಯಾಯಾಲಯ ಜಾಮೀನು ನೀರಾಕರಿಸಿದೆ. ಇದೇ ನ್ಯಾಯಾಲಯ ಕೃಷ್ಣ ಅವರಿಗೆ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗುತ್ತದೆ ಎಂದು ಕೃಷ್ಣ ಅವರ ಪರ ವಕೀಲರು ತಿಳಿಸಿದ್ದಾರೆ.

ಸಿಐಡಿ ಪೊಲೀಸರು ನಗರದ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರ ದಾಖಲಿಸಿ ಕೃಷ್ಣ ಅವರನ್ನು ಬಂಧಿಸಿದ್ದರು. ನ್ಯಾಯಾಂಗ ಬಂಧನದಲ್ಲಿರುವ ಕೃಷ್ಣ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.