ADVERTISEMENT

ಕೆಎಂಎಫ್: ರೇವಣ್ಣ ವಿರುದ್ಧದ ದೂರಿಗೆ ಹೈಕೋರ್ಟ್ ತಡೆ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2011, 19:30 IST
Last Updated 18 ಮಾರ್ಚ್ 2011, 19:30 IST

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಲದಲ್ಲಿ (ಕೆಎಂಎಫ್) ಹಣಕಾಸು ಅವ್ಯವಹಾರ ಮಾಡಿರುವ ಆರೋಪ ಹೊತ್ತಿರುವ ಹಾಸನ ಹಾಲು ಒಕ್ಕೂಟದ ಅಧ್ಯಕ್ಷ, ಜೆಡಿಎಸ್ ಮುಖಂಡ ಎಚ್.ಡಿ. ರೇವಣ್ಣ ಅವರ ವಿರುದ್ಧದ ದೂರಿಗೆ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ.

ಈ ವಿವಾದಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರು ಸಲ್ಲಿಸಿರುವ ನಾಲ್ಕು ಪ್ರತ್ಯೇಕ ಅರ್ಜಿಗಳನ್ನೂ ಮಾನ್ಯ ಮಾಡಿರುವ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಅವರು ಈ ಮಧ್ಯಂತರ ಆದೇಶ ಹೊರಡಿಸಿದ್ದಾರೆ.

ರೇವಣ್ಣ ಅವರು ಕೆಎಂಎಫ್ ಅಧ್ಯಕ್ಷರಾಗಿದ್ದ ವೇಳೆ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಿರುವ ಆರೋಪ ಇದಾಗಿದೆ. ಇದಕ್ಕೆ ಸಂಬಂಧಿಸಿದಂತೆ ನಾಲ್ಕು ಅರ್ಜಿ ಗಳನ್ನು ರೇವಣ್ಣ ಅವರು ಕೋರ್ಟ್‌ಗೆ ಸಲ್ಲಿಸಿದ್ದರು.

ತಮ್ಮ ವಿರುದ್ಧ ದುರುದ್ದೇಶ ಪೂರ್ವಕವಾಗಿ ಆರೋಪ ಮಾಡಿರುವ ಬಗ್ಗೆ ಹಾಗೂ ನಿಯಮಾನುಸಾರ ತಮಗೆ ನೋಟಿಸ್ ನೀಡಿಲ್ಲ ಎಂಬ ಬಗ್ಗೆ ರೇವಣ್ಣ ಅವರ ವಾದವನ್ನು ಪೀಠ ಮಾನ್ಯ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.