ಬೆಂಗಳೂರು: ಇದೇ 25ರಿಂದ ಸೆ.14ರವರೆಗೆ ನಡೆಯಬೇಕಿದ್ದ 2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಯ ಮುಖ್ಯ ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಮುಂದೂಡಿದೆ.
ಹೈಕೋರ್ಟ್‌ನ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಆಯೋಗದ ಕಾರ್ಯದರ್ಶಿ ವಿ.ಬಿ.ಪಾಟೀಲ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಒಟ್ಟು 362 ಹುದ್ದೆಗಳ ನೇಮಕಾತಿಗೆ ಈ ಪರೀಕ್ಷೆ ನಡೆಯಬೇಕಿತ್ತು. ಪರೀಕ್ಷೆಯ ಮುಂದಿನ ವೇಳಾ ಪಟ್ಟಿಯನ್ನು ಆಯೋಗದ ವೆಬ್‌ಸೈಟ್‌ನಲ್ಲಿ
(-http://kpsc.kar.nic.in) ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
ಅರ್ಜಿ ಸ್ವೀಕೃತಿ ಸ್ಥಗಿತ: ಗ್ರಾಮ ಪಂಚಾಯಿತಿಗಳಲ್ಲಿನ 1,750 ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳಿಗೆ ಅರ್ಜಿ ಸ್ವೀಕೃತಿಯನ್ನು ಕೆಪಿಎಸ್‌ಸಿ ಸ್ಥಗಿತಗೊಳಿಸಿದೆ. ಇದೇ 25ರವರೆಗೂ ಅರ್ಜಿ ಸಲ್ಲಿಸಲು ಅವಕಾಶ ಇತ್ತು.
ಆದರೆ, ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಮೀಸಲಾತಿ ವಿಷಯದಲ್ಲಿ ನಿಲುವು ಸ್ಪಷ್ಟಪಡಿಸಲು ಸರ್ಕಾರ ವಿಫಲವಾದ ಕಾರಣದಿಂದ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ವಿಚಾರಣೆಯನ್ನು 10ಕ್ಕೆ ಮುಂದೂಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.