ADVERTISEMENT

ಕೆ.ಎಚ್‌.ಹನುಮೇಗೌಡ ನಿಧನ

​ಪ್ರಜಾವಾಣಿ ವಾರ್ತೆ
Published 13 ಮೇ 2018, 19:30 IST
Last Updated 13 ಮೇ 2018, 19:30 IST
ಕೆ.ಎಚ್‌.ಹನುಮೇಗೌಡ ನಿಧನ
ಕೆ.ಎಚ್‌.ಹನುಮೇಗೌಡ ನಿಧನ   

ಹಾಸನ: ಹಿರಿಯ ರಾಜಕಾರಣಿ ಮಾಜಿ ಸಚಿವ ಕೆ.ಎಚ್‌.ಹನುಮೇಗೌಡ (89) ಅವರು ವಯೋಸಹಜ ಕಾಯಿಲೆಯಿಂದ ಭಾನುವಾರ ನಗರದ ಸಂಜೀವಿನಿ ಸಹಕಾರಿ ಆಸ್ಪತ್ರೆಯಲ್ಲಿ ನಿಧನರಾದರು.

ಹನುಮೇಗೌಡರು 1972ರಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಿಂದ ಸಂಸ್ಥಾ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಜಯ ಗಳಿಸುವ ಮೂಲಕ ರಾಜಕೀಯ ಪ್ರವೇಶಿಸಿದರು. 1978ರಲ್ಲಿ ಕಾಂಗ್ರೆಸ್‌ ಐ, 1989ರಲ್ಲಿ ಕಾಂಗ್ರೆಸ್‌, 1999ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.

1994ರಲ್ಲಿ ವೀರಪ್ಪ ಮೊಯಿಲಿ ಅವರ ಸರ್ಕಾರದಲ್ಲಿ ಕಾಡಾ ಸಚಿವರಾಗಿದ್ದರು. ಅವರಿಗೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಕುವೆಂಪು ನಗರದ ಕೆಎಚ್‌ಬಿ ಕಾಲೊನಿಯ ಪುತ್ರ ಕೆ.ಎಚ್‌.ಸೋಮಶೇಖರ್ ನಿವಾಸದಲ್ಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಶಾಂತಿಗ್ರಾಮ ಸಮೀಪದ ಕೆ.ಬ್ಯಾಡರಹಳ್ಳಿಯಲ್ಲಿ ಸೋಮವಾರ ಮಧ್ಯಾಹ್ನ 1 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ. ಮಾಹಿತಿಗೆ ಮೊ: 9964666997 ಸಂಪರ್ಕಿಸಬಹುದು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.