ADVERTISEMENT

ಕೆಎಸ್ಆರ್‌ಟಿಸಿಗೆ ₹10 ಕೋಟಿ ಲಾಭ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2018, 19:30 IST
Last Updated 2 ಮಾರ್ಚ್ 2018, 19:30 IST
ಸಂಗ್ರಹ ಚಿತ್ರ.
ಸಂಗ್ರಹ ಚಿತ್ರ.   

ಬೆಂಗಳೂರು: ಕಳೆದ ವರ್ಷ ₹138.50 ಕೋಟಿ ನಷ್ಟದಲ್ಲಿದ್ದ ಕೆಎಸ್ಆರ್‌ಟಿಸಿ ಪ್ರಸಕ್ತ ವರ್ಷ ₹10.29 ಕೋಟಿ ಲಾಭ ಗಳಿಸಿದೆ ಎಂದು ಸಂಸ್ಥೆಯ ಅಧ್ಯಕ್ಷ ಕೆ.ಗೋಪಾಲ ಪೂಜಾರಿ ಹೇಳಿದರು.

ಶುಕ್ರವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆರ್ಥಿಕ ವರ್ಷ ಮುಗಿಯಲು ಒಂದು ತಿಂಗಳು ಬಾಕಿ ಇದ್ದು, ಕನಿಷ್ಠ ₹15 ಕೋಟಿ ಲಾಭದ ನಿರೀಕ್ಷೆಯಲ್ಲಿದ್ದೇವೆ. ಈ ವರ್ಷ 1,621 ಬಸ್‌ಗಳನ್ನು ಖರೀದಿಸಿದ್ದೇವೆ. ಹೊಸ ಬಸ್‌ಗಳು ಸೇರ್ಪಡೆಯಾಗಿರುವುದರಿಂದ ಮುಂದಿನ ವರ್ಷ ಲಾಭ ಪ್ರಮಾಣ ಇನ್ನಷ್ಟು ಹೆಚ್ಚಲಿದೆ’ ಎಂದರು.

‘ಶೌಚಾಲಯಗಳ ನಿರ್ವಹಣೆಯನ್ನು ಸುಲಭ್‌ ಇಂಟರ್‌ನ್ಯಾಷನಲ್‌ ಸಂಸ್ಥೆಗೆ ನೀಡಲಿದ್ದೇವೆ. ಖಾಲಿಯಿರುವ ಕಡೆ ನೇರವಾಗಿ ಅವರಿಗೆ ವಹಿಸುತ್ತೇವೆ. ಉಳಿದ ಕಡೆಗಳಲ್ಲಿ ಗುತ್ತಿಗೆ ಮುಗಿದ ನಂತರ ನೀಡಲಾಗುವುದು’ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಸ್.ಆರ್.ಉಮಾಶಂಕರ್ ತಿಳಿಸಿದರು.

ADVERTISEMENT

‘1,500ಕ್ಕೂ ಹೆಚ್ಚು ಬಸ್‌ಗಳಲ್ಲಿ ವೈ–ಫೈ ಅಳವಡಿಸಲಾಗಿದೆ. ಮೂರು ತಿಂಗಳಲ್ಲಿ ಉಳಿದ ಬಸ್‌ಗಳಲ್ಲಿ ಸೌಲಭ್ಯ ಕಲ್ಪಿಸುತ್ತೇವೆ. ಜಯದೇವ ಹೃದ್ರೋಗ ಸಂಸ್ಥೆಗೆ 40 ಲಕ್ಷ ದೇಣಿಗೆ ನೀಡಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.