ADVERTISEMENT

ಕೆಎಸ್‌ಒಯು ಪದವಿಗೆ ಸರ್ಕಾರದ ಮಾನ್ಯತೆ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2018, 20:12 IST
Last Updated 5 ಮಾರ್ಚ್ 2018, 20:12 IST

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮಾನ್ಯತೆಯನ್ನು ಯುಜಿಸಿ ರದ್ದುಗೊಳಿಸುವುದಕ್ಕೂ ಮುನ್ನ ತಾಂತ್ರಿಕೇತರ ಹಾಗೂ ರಾಜ್ಯದಲ್ಲಿನ ಇನ್‌ಹೌಸ್‌ ಕೋರ್ಸ್‌ಗಳಲ್ಲಿ ತೇರ್ಗಡೆ ಹೊಂದಿದವರನ್ನು ವ್ಯಾಸಂಗ, ನೇಮಕಾತಿ, ಬಡ್ತಿಗಾಗಿ ಪರಿಗಣಿಸುವಂತೆ ಉನ್ನತ ಶಿಕ್ಷಣ ಇಲಾಖೆ ಆದೇಶಿಸಿದೆ.

2013–14 ಹಾಗೂ 2014–15ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶಾತಿ ಪಡೆದು ತೇರ್ಗಡೆಯಾದವರಿಗೂ ಇದು ಅನ್ವಯಿಸುತ್ತದೆ. ಈ ಆದೇಶ ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರಲಿದೆ.

2013ಕ್ಕೂ ಮುಂಚೆ ಉತ್ತೀರ್ಣರಾಗಿ ಅಂಕಪಟ್ಟಿ, ಪದವಿ ‍ಪ್ರಮಾಣ ಪತ್ರಗಳನ್ನು ‍ಪಡೆಯದೇ ಇರುವ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ, ಅಂಕ
ಪಟ್ಟಿ ವಿತರಿಸಬೇಕು ಎಂದು ವಿಶ್ವವಿದ್ಯಾಲಯಕ್ಕೆ ಸೂಚಿಸಿದೆ. ‘ತಾಂತ್ರಿಕೇತರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿದ್ದ, ಅಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೂ ವ್ಯಾಸಂಗ ಮುಂದುವರಿಸಲು ಹಾಗೂ ಪದವಿ ಪ್ರಮಾಣ ಪತ್ರಗಳನ್ನು ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.