ADVERTISEMENT

ಕೆ.ಎಸ್‌.ಕಾಸೀಂ ನಿಧನ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2013, 19:59 IST
Last Updated 24 ಸೆಪ್ಟೆಂಬರ್ 2013, 19:59 IST

ಬೆಂಗಳೂರು: ರಾಜ್ಯ ವಕೀಲರ ಸಂಘದ ಮಾಜಿ ಅಧ್ಯಕ್ಷ ಕೆ.ಎಸ್‌.ಕಾಸೀಂ (82) ಅವರು ಸೋಮವಾರ ನಿಧನ ರಾದರು.

ಮೂಲತಃ ಕಾರ್ಕಳದವರಾದ ಕಾಸೀಂ, ಆಸ್ಟಿನ್‌ ಟೌನ್‌ ಸಮೀಪದ ಕ್ಸೇವಿಯರ್‌ ಲೇಔಟ್‌ನಲ್ಲಿ ಕುಟುಂಬ ಸದಸ್ಯರೊಂದಿಗೆ ನೆಲೆಸಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ. ಅಂತ್ಯಕ್ರಿಯೆ ನೀಲಸಂದ್ರ ಖಬರಸ್ತಾನದಲ್ಲಿ  ಮಂಗಳವಾರ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.