
ಪ್ರಜಾವಾಣಿ ವಾರ್ತೆಬೆಂಗಳೂರು: `ಮಾಧ್ಯಮ ಪ್ರತಿನಿಧಿಗಳ ಮೇಲೆ ವಕೀಲರ ಹಲ್ಲೆ ಒಂದು ಕೆಟ್ಟ ಬೆಳವಣಿಗೆ. ಇಂತಹ ಅನಾಹುತಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಸೋತಿದೆ~ ಎಂದು ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಖಾತೆಯ ಸಚಿವ ಎಂ.ವೀರಪ್ಪ ಮೊಯಿಲಿ ವಿಷಾದಿಸಿದರು.
ನಗರದಲ್ಲಿ ಶನಿವಾರ ನಡೆದ `ಬಿಂಬ ಭಾರತ~ ಪುಸ್ತಕದ ಬಿಡುಗಡೆ ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಕೋರ್ಟ್ ಆವರಣದಲ್ಲಿಯೇ ವಕೀಲರು ಈ ರೀತಿ ನಡೆದುಕೊಂಡಿರುವ ರೀತಿ ಸರಿಯಲ್ಲ. ಭಿನ್ನಾಭಿಪ್ರಾಯಗಳನ್ನು ಮಾತುಕತೆಯ ಮೂಲಕ ಪರಿಹರಿಸಿಕೊಳ್ಳಲು ಅವಕಾಶವಿತ್ತು~.
`ಈ ಪ್ರವೃತ್ತಿಗೆ ನ್ಯಾಯಾಂಗ ತನಿಖೆಯೇ ಪರಿಹಾರವಲ್ಲ. ಇವು ಮರುಕಳಿಸದಂತೆ ನೋಡಿಕೊಳ್ಳಬೇಕು. ವಕೀಲರು ಹಾಗೂ ಮಾಧ್ಯಮ ಸಂಘಗಳು ಪರಸ್ಪರ ಮಾತುಕತೆ ಮೂಲಕ ಭಿನ್ನಾಭಿಪ್ರಾಯಗಳನ್ನು ನಿವಾರಿಸಿಕೊಳ್ಳಬೇಕು~ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.