ADVERTISEMENT

ಕೆಪಿಎಸ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 8 ಜನ ಆರೋಪಿಗಳ ಬಂಧನ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2018, 19:40 IST
Last Updated 23 ಮಾರ್ಚ್ 2018, 19:40 IST

ಕಲಬುರ್ಗಿ: ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) ಹಾಗೂ ವಿವಿಧ ಇಲಾಖೆಗಳು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಮಾಡಿಕೊಂಡು, ಮೈಕ್ರೊ ಇಯರ್ ಫೋನ್ ಮೂಲಕ ಉತ್ತರ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಎಂಟು ಆರೋಪಿಗಳನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಮೈಮುದ್ ನದಾಫ್, ನಾಗರಾಜ ಟೆಂಗಳಿ, ಡಾ.ಕಾಮ್ರಾನ್ ಕೈಸರ್, ಅಬ್ದುಲ್ ನಜೀಬ್, ಹಜರತ್ ಅಲಿ ನದಾಫ್, ಇಮಾಮಸಾಬ್ ನದಾಫ್, ನಾಸೀರ್ ಹಾಗೂ ಸಲೀಂ ಅಲಿ ಬಂಧಿತರು. ಬಂಧಿತರಲ್ಲಿ ಒಬ್ಬರು ವೈದ್ಯರಾಗಿದ್ದು, ಇನ್ನುಳಿದವರು ಸರ್ಕಾರಿ ನೌಕರರಾಗಿದ್ದಾರೆ.

‘ಈಗಾಗಲೇ ಬಂಧಿಸಿರುವ ಚಂದ್ರಕಾಂತ ಹರಳಯ್ಯ, ಭೀಮರಾಯ ಹೂವಿನಹಳ್ಳಿ ಮತ್ತು ತಮಜೀತ್ ಪಟೇಲ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಿ.ಇಡಿ ಕಾಲೇಜುಗಳ ಪ್ರಾಂಶುಪಾಲರಾದ ಡಾ.ರೆಹನಾ ಬೇಗಂ ಮತ್ತು ಡಾ. ಹುಮೇರಾ ಬೇಗಂ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.