ADVERTISEMENT

ಕೆಪಿಎಸ್‌ಸಿ ಪ್ರಶ್ನೆ ಪತ್ರಿಕೆ ಹಗರಣ: ಆರೋಪಿಯಿಂದ ₹45.71ಲಕ್ಷ ನಗದು ವಶ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2018, 19:30 IST
Last Updated 26 ಮಾರ್ಚ್ 2018, 19:30 IST
ಕೆಪಿಎಸ್‌ಸಿ ಪ್ರಶ್ನೆ ಪತ್ರಿಕೆ ಹಗರಣ: ಆರೋಪಿಯಿಂದ ₹45.71ಲಕ್ಷ ನಗದು ವಶ
ಕೆಪಿಎಸ್‌ಸಿ ಪ್ರಶ್ನೆ ಪತ್ರಿಕೆ ಹಗರಣ: ಆರೋಪಿಯಿಂದ ₹45.71ಲಕ್ಷ ನಗದು ವಶ   

ಕಲಬುರ್ಗಿ: ಕೆಪಿಎಸ್‌ಸಿ ಪ್ರಶ್ನೆ ಪತ್ರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿ, ನ್ಯಾಷನಲ್ ಬಿ.ಇಡಿ ಕಾಲೇಜಿನ ಪ್ರಾಂಶುಪಾಲರಾದ ಡಾ.ರೆಹನಾ ಬೇಗಂ ಅವರಿಂದ ಪೊಲೀಸರು ₹45.71 ನಗದು ವಶಪಡಿಸಿಕೊಂಡಿದ್ದಾರೆ.

ಪ್ರಕರಣದ ಎರಡನೇ ಆರೋಪಿ ತಮಜೀದ್ ಪಟೇಲ್ ಎಂಬುವರು ಈ ಹಣವನ್ನು ಕೊಟ್ಟಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ್ ತಿಳಿಸಿದ್ದಾರೆ.

ಈ ಪ್ರಕರದಲ್ಲಿ 13 ಜನರು ಭಾಗಿಯಾಗಿದ್ದು, ಅವರೆಲ್ಲರನ್ನೂ ಬಂಧಿಸಲಾಗಿದೆ. ಡಾ.ರೆಹನಾ  ಬೇಗಂ ಮತ್ತು ಗ್ಲೋಬಲ್ ಬಿ.ಇಡಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಹುಮೇರಾ ಬೇಗಂ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ 11 ಆರೋಪಿಗಳ ಪೈಕಿ ಒಬ್ಬರು ವೈದ್ಯರಾಗಿದ್ದು, ಏಳು ಜನ ಸರ್ಕಾರಿ ನೌಕರರಾಗಿದ್ದಾರೆ.

ADVERTISEMENT

ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.