ADVERTISEMENT

ಕೆರೆ ಒತ್ತುವರಿ ಆರೋಪ: ಮಧ್ಯಂತರ ಅರ್ಜಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2013, 20:09 IST
Last Updated 19 ಡಿಸೆಂಬರ್ 2013, 20:09 IST

ಬೆಂಗಳೂರು: ನಗರದ ಸಾರಕ್ಕಿ ಕೆರೆಯ ಜಮೀನನ್ನು ಒತ್ತುವರಿ ಮಾಡಿರುವ ಆರೋಪ ಎದುರಿಸುತ್ತಿರುವ ಆರು ಮಂದಿ ತಮ್ಮ ವಿರುದ್ಧದ ಆರೋಪದಲ್ಲಿ ಹುರುಳಿಲ್ಲ ಎಂದು ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.

ನೀರಿನ ಹಕ್ಕಿಗಾಗಿ ಜನರ ಆಂದೋಲನ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ  ವೇಳೆ ಹೈಕೋರ್ಟ್‌ ನೀಡಿದ್ದ ನಿರ್ದೇಶನದಂತೆ ಸ್ಥಳೀಯ ತಹಶೀಲ್ದಾರ್‌ ಸ್ಥಳ ಪರಿಶೀಲನೆ ನಡೆಸಿದ್ದರು. ಆರು ಕುಟುಂಬಗಳು ಕೆರೆಯ ಜಮೀನನ್ನು ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸಿವೆ ಎಂದು ನ್ಯಾಯಾ ಲಯಕ್ಕೆ ವರದಿ ಸಲ್ಲಿಸಿದ್ದರು.

ಈ ವರದಿಗೆ ಆಕ್ಷೇಪ ವ್ಯಕ್ತಪಡಿಸಿ ಗುರುವಾರ ನ್ಯಾಯಾಲಯಕ್ಕೆ ಮಧ್ಯಂತರ ವರದಿ ಸಲ್ಲಿಸಿರುವ ಆರು ಮಂದಿ, ‘ಜಮೀನು ನಮ್ಮ ಸ್ವಂತದ್ದು. ಹಲವು ವರ್ಷಗಳಿಂದ ನಾವು ಕಂದಾಯ ಪಾವತಿಸುತ್ತಿದ್ದೇವೆ. ಕೆರೆಯ ಜಮೀನು ಒತ್ತುವರಿ ಮಾಡಿದ್ದೇವೆ ಎಂಬ ಆರೋಪದಲ್ಲಿ ಸತ್ಯಾಂಶವಿಲ್ಲ’ ಎಂದು ಹೇಳಿದ್ದಾರೆ.

ಮುಂದಿನ ವಿಚಾರಣೆ ವೇಳೆ ಜಮೀನಿಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಹಾಜುರುಪಡಿ ಸುವಂತೆ ಅರ್ಜಿದಾರರಿಗೆ ಸೂಚನೆ ನೀಡಿದ ಮುಖ್ಯ ನ್ಯಾಯಮೂರ್ತಿ ಡಿ.ಎಚ್. ವಘೇಲಾ ಹಾಗೂ  ನ್ಯಾಯಮೂರ್ತಿ ಎಸ್.ಎನ್. ಸತ್ಯನಾರಾಯಣ ಅವ ರಿದ್ದ ಪೀಠಕ್ಕೆ, ಪ್ರಕರಣದ ವಿಚಾರಣೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.