ಬೆಂಗಳೂರು: `ನಗರದ ನೀರಿನ ಅಭಾವವನ್ನು ಮನಗಂಡಿರುವ ರಾಜ್ಯ ಸರ್ಕಾರ ಕೆರೆಗಳ ಸಂರಕ್ಷಣೆಗೆ ಬದ್ಧವಾಗಿದೆ~ ಎಂದು ಗೃಹ ಸಚಿವ ಆರ್.ಅಶೋಕ್ ಹೇಳಿದರು.ನಗರದ ಬನಶಂಕರಿ ಎರಡನೇ ಹಂತದ ಗಣೇಶ ವಾರ್ಡ್‌ನಲ್ಲಿ ನೂತನವಾಗಿ ನಿರ್ಮಿಸಿರುವ ಈಜುಕೊಳವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.
`ನಗರದ ಕೆರೆಗಳ ಮಹತ್ವ ಅರಿತಿದ್ದ ಬೆಂಗಳೂರು ನಗರ ನಿರ್ಮಾತೃ ಕೆಂಪೇಗೌಡದ ವಿವಿಧ ಕಡೆಗಳಲ್ಲಿ ಕೆರೆಗಳನ್ನು ನಿರ್ಮಿಸಿದ್ದರು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ನಗರದ ಕೆರೆಗಳು ಮಾಯವಾಗಿವೆ. ಇದರಿಂದ ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ.
ಇನ್ನು ಮುಂದಾದರೂ ನಗರದಲ್ಲಿ ಉಳಿದುಕೊಂಡಿರುವ ಕೆರೆಗಳನ್ನು ಉಳಿಸಿಕೊಳ್ಳುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ. ಈಗಾಗಲೇ ನಗರದ 40 ಕೆರೆಗಳ ಸಂರಕ್ಷಣೆ ಮಾಡಲಾಗಿದೆ~ ಎಂದರು. ಮೇಯರ್ ಶಾರದಮ್ಮ, ಬಿಬಿಎಂಪಿ ಸದಸ್ಯರಾದ ವೆಂಕಟೇಶಮೂರ್ತಿ, ಎನ್.ನಾಗರಾಜ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.